ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Thursday, September 11, 2025
ಮಂಗಳೂರು: ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಇಂದು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಿಯಾಜ್ ಅಲಿಯಾಸ್ ನಿಯಾ ಎಂದು ಗುರುತಿಸಲಾಗಿದೆ. ಉರ್ವಾ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ವರದಿಯಾಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ನಿಯಾಜ್ ಅಲಿಯಾಸ್ ನಿಯಾ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಅದರಂತೆ ಇಂದು (ಸೆ.11) ಬೆಳಗಿನ ಜಾವ ಬೆಂಗಳೂರಿನ ಹುಳಿಮಾವು ಅರಕೆರೆ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಈತನ ವಿರುದ್ಧ ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಒಟ್ಟು ೧೩ ಪ್ರಕರಣಗಳು ದಾಖಲಾಗಿದ್ದು, ಬೇರೆ ಬೇರೆ ನ್ಯಾಯಾಲಯಗಳಲ್ಲಿ ಈತನ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು.