ಧರ್ಮಸ್ಥಳ ಬುರುಡೆ ಪ್ರಕರಣ: ಗುರುತು ಪತ್ತೆ ಹಚ್ಚಿದ ಎಸ್‌ಐಟಿ

ಧರ್ಮಸ್ಥಳ ಬುರುಡೆ ಪ್ರಕರಣ: ಗುರುತು ಪತ್ತೆ ಹಚ್ಚಿದ ಎಸ್‌ಐಟಿ


ಮಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನೂರಾರು ಶವಗಳನ್ನು ಹೂತುಹಾಕಿರುವ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ತಂಡ (ಎಸ್‌ಐಟಿ) ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ.17 ಮತ್ತು 18 ರಂದು ಎಸ್‌ಐಟಿ ನಡೆಸಿದ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರಗಳಲ್ಲಿ ಒಂದು ಅಸ್ಥಿಪಂಜರದ ಗುರುತನ್ನು 2ನೇ ದಿನದಲ್ಲಿ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಪತ್ತೆ ಹಚ್ಚಲಾಗಿತ್ತು. ಇದೀಗ ಮತ್ತೊಬ್ಬನ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಎಸ್‌ಐಟಿ ಪತ್ತೆ ಹಚ್ಚಿ ಕಚೇರಿಗೆ ಕರೆದು ಮಾಹಿತಿ ಕಲೆ ಹಾಕಿದೆ.

2-10-2013 ರಂದು ಬೆಂಗಳೂರಿನ ಬಾರಿನಲ್ಲಿ ಕೆಲಸಕ್ಕೆ ಮಾಡುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಬೋಜಪ್ಪ ಮತ್ತು ಚೆನ್ನಮ್ಮ ಎಂಬವರ ಪುತ್ರ ಆದಿಶೇಷ ನಾರಾಯಣ (27) ಎಂಬಾತ ಮನೆಬಿಟ್ಟು ನಾಪತ್ತೆಯಾಗಿದ್ದು, ಅಸ್ಥಿಪಂಜರದ ಸಮೀಪ ಎಸ್‌ಐಟಿ ತಂಡಕ್ಕೆ ಡ್ರೈವಿಂಗ್ ಲೈಸೆನ್ಸ್ ಕಾರ್ಡ್ ಸಿಕ್ಕಿದ್ದು ಅದರ ಆಧಾರದ ಮೇಲೆ ಆದಿಶೇಷನ ಅಕ್ಕಂದಿರಾದ ಲಕ್ಷ್ಮಿ, ಪದ್ಮ ಹಾಗೂ ಕುಟಂಬದ ಸದಸ್ಯರನ್ನು ಸೆ.25 ರಂದು ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಕರೆಸಿದ್ದು ಕಚೇರಿಗೆ ಬಂದ ಇವರು ಡ್ರೈವಿಂಗ್ ಲೈಸೆನ್ಸ್ ತಮ್ಮನದ್ದು ಎಂದು ಗುರುತಿಸಿದ್ದಾರೆ. ನಾಪತ್ತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಡಿಎನ್‌ಎ ಮಾಡಿಸುವುದಾಗಿಯೂ ಎಸ್‌ಐಟಿ ಅಧಿಕಾರಿಗಳು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.

ಆದಿಶೇಷ ನಾರಾಯಣ ಪದೇ ಪದೇ ಮನೆ ಬಿಟ್ಟು ಹೋಗಿ ವಾಪಸ್ ಬರುತ್ತಿದ್ದ ಕಾರಣದಿಂದ ನಾಪತ್ತೆಯಾಗಿರುವ ಬಗ್ಗೆ ಕುಟುಂಬ ಸದಸ್ಯರು ಯಾರು ಕೂಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿದುಬಂದಿದೆ.


ಧರ್ಮಸ್ಥಳ ಬುರುಡೆ ಗ್ಯಾಂಗ್ ಮೋಸ: ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ವಜಾ ಆದೇಶ ಮುಚ್ಚಿಟ್ಟು ಸರ್ಕಾರಕ್ಕೆ ವಂಚನೆ!


ದೇಶವೇ ತಿರುಗಿ ನೋಡುವಂತಹ ಪ್ರಕರಣವಾಗಿರುವ ‘ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ ತಿಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಸೇರಿದಂತೆ ಕೆಲವು ವ್ಯಕ್ತಿಗಳು ಮತ್ತು ಅರ್ಜಿದಾರರು, ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿತ್ತು. ಆದರೆ, ಈ ಅರ್ಜಿ ವಿಚಾರಣೆ ಮಾಡಿದ್ದ ಸುಪ್ರೀಂ ಕೋರ್ಟ್ ಇದು ಕೇವಲ ವೈಯಕ್ತಿಕ ಹಿತಾಸಕ್ತಿ ಅರ್ಜಿಯಾಗಿದ್ದು, ಹಣ ವಸೂಲಿಗೆ ಸಲ್ಲಿಸಿದ ಅರ್ಜಿಯಾಗಿದೆ ಎಂದು ವಜಾಗೊಳಿಸಿತ್ತು.

ಸುಪ್ರೀಂ ಕೋರ್ಟ್‌ನಿಂದ ಪಿಐಎಲ್ ವಜಾ ಮತ್ತು ಛೀಮಾರಿ:

ದೂರುದಾರ ಚಿನ್ನಯ್ಯ ಎಂಬುವವರ ಮೂಲಕ ಧರ್ಮಸ್ಥಳದ ಕೆಲ ಪ್ರಕರಣಗಳ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸುವಂತೆ ಕೋರಿ ಮೇ ತಿಂಗಳ ಆರಂಭದಲ್ಲಿ ಸುಪ್ರೀಂ ಕೋರ್ಟ್ ಕದ ತಟ್ಟಲಾಗಿತ್ತು.


ಎಸ್‌ಐಟಿ ಕಚೇರಿಗೆ ಭೇಟಿ ನೀಡಿದ ಯು.ಬಿ. ಅಯ್ಯಪ್ಪ ಮಗ ಜೀವನ್:


ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಕೊಡುಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ ಅವರ ಮಗ ಜೀವನ್ ಭೇಟಿ ನೀಡಿದ್ದಾರೆ.

ಯು.ಬಿ. ಅಯ್ಯಪ್ಪ ಅವರ ಐಟಿ ಕಾರ್ಡ್, ವಾಕಿಂಗ್ ಸ್ಟಿಕ್ ಬಂಗ್ಲೆಗುಡ್ಡ ಬಳಿ ಪತ್ತೆಯಾಗಿದ್ದು, ಬುರುಡೆ ಮತ್ತು ಅಸ್ಥಿಪಂಜರದ ಬಳಿ ಪತ್ತೆಯಾಗಿತ್ತು. ಈ ಹಿಂದೆ ಸೆ.20ರಂದು ಆಗಮಿಸಿ ಮಾಹಿತಿ ನೀಡಿ ತೆರಳಿದ್ದ ಜೀವನ್, ಇಂದು ಮತ್ತೆ ಎಸ್‌ಐಟಿ ಕಚೇರಿಗೆ ಜೀವನ್ ಆಗಮಿಸಿದ್ದಾರೆ. ಇಂದು ತಂದೆಯ ಬಗ್ಗೆ ಕೆಲವು ದಾಖಲೆಗಳನ್ನು ಹಾಜರು ಪಡಿಸುವ ಸಾಧ್ಯತೆ ಇದ್ದು, ಅಯ್ಯಪ್ಪ ಸಾವಿನ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆ ಇದೆ.


ದೂರುದಾರರ ವಿರುದ್ಧ ಎಸ್‌ಐಟಿಗೆ ದೂರು ನೀಡಿದ ಸ್ಥಳೀಯ:


ಬುರುಡೆ ಪ್ರಕರಣಕ್ಕೆ ಸಾಕ್ಷಿಗಳೆಂದು ಬರುವವರನ್ನು ಆರೋಪಿಗಳಾಗಿಸಿ ತನಿಖೆ ಮಾಡುವಂತೆ ಧರ್ಮಸ್ಥಳ ಕ್ಷೇತ್ರದ ಭಕ್ತ ಶಶಿರಾಜ್ ಶೆಟ್ಟಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಇದೇ ವೇಳೆ ಬುರುಡೆ ಪ್ರಕರಣಕ್ಕೆ ಸಾಕ್ಷಿಗಳೆಂದು ಬರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಸ್‌ಐಟಿ ಅಧಿಕಾರಿಗಳಿಗೆ ದೂರಿನಲ್ಲಿ ತಿಳಿಸಿದ್ದಾರೆ. ಈಗಾಗಲೇ ಚಿನ್ನಯ್ಯ ತಾನು ಹೇಳಿದ್ದೆಲ್ಲ ಸುಳ್ಳು ಎಂದು ಒಪ್ಪಿಕೊಂಡಿದ್ದಾನೆ. ಈ ನಡುವೆ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರಕ್ಕೆ ಸಾಕ್ಷಿಗಾಳಾಗಿ ಅನೇಕರು ಬರುತ್ತಿದ್ದಾರೆ. ಈ ಮೊದಲು ಸುಜಾತ ಭಟ್ ಹೇಳಿದ್ದು, ಸುಳ್ಳು ಎಂದು ಆಯಿತು, ಈ ನಡುವೆ ಪುರಂದರ ಹಾಗೂ ತುಕಾರಾಂ, ಜಯಂತ್ ಟಿ., ಲಾಯರ್ ಜಗದೀಶ್ ಬಂದಿದ್ದಾರೆ. 

ಸೌಜನ್ಯ ತಾಯಿ ಕುಸುಮಾವತಿ ಚಿನ್ನಯ್ಯನ ಬ್ರೈನ್ ಮ್ಯಾಪಿಂಗ್ ಮಾಡಬೇಕು ಅಂತ ಹೇಳಿದ್ದರು. ದಿನಕ್ಕೊಬ್ಬರು ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆಯವರ ಹೆಸರು ಕೆಡಿಸಲೆಂದೆ ಬರುತ್ತಿದ್ದಾರೆ. 40 ವರ್ಷದ ಹಿಂದೆಯೇ ಈ ರೀತಿ ಬೇರೆ ಬೇರೆ ಷಡ್ಯಂತ್ರ ಮಾಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.


ಬೆಳ್ತಂಗಡಿ ನ್ಯಾಯಾಲಯಕ್ಕೆ ಚಿನ್ನಯ್ಯ 


ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನನ್ನು ಬಿಎನ್‌ಎಸ್‌ಎಸ್ 183 ಹೇಳಿಕೆ ನೀಡಲು ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.25 ರಂದು ಪೊಲೀಸರು  ಶಿವಮೊಗ್ಗ ಜೈಲಿನಿಂದ ಕರೆದುಕೊಂಡು ಬಂದಿದ್ದಾರೆ. 12 ಗಂಟೆಗೆ ನ್ಯಾಯಾಧೀಶರ ಮುಂದೆ ಚಿನ್ನಯ್ಯನನ್ನು ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಈತನ ಹೇಳಿಕೆ ದಾಖಲಿಸುವ ಕಾರ್ಯ ಆರಭಿಸಿದ್ದಾರೆ. ಇಂದು ಹೇಳಿಕೆ ಸಂಪೂರ್ಣ ಮುಗಿಯದ ಹೆನ್ನೆಲೆಯಲ್ಲಿ ಸೆ.27 ಕ್ಕೆ ಹಾಜರುಪಡಿಸಿ ಉಳಿದ ಹೇಳಿಕೆ ದಾಖಲು ಮಾಡಲು ಆದೇಶ ಹೊರಡಿಸಿದ್ದಾರೆ.’


ಶಿವಮೊಗ್ಗ ಜಿಲ್ಲೆಗೆ ವಾಪಾಸ್


ವಿಚಾರಣೆಯ ಬಳಿಕ ಬೆಳ್ತಂಗಡಿ ಕೋರ್ಟ್‌ನಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article