ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ನಾರಾಯಣಗುರು ಜಯಂತಿ
ಕಾರ್ಯಕ್ರಮನ್ನುದೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ನಾರಾಯಣಗುರುಗಳ ಆದರ್ಶ ಮೌಲ್ಯಗಳನ್ನು ಜೀವನದಲ್ಲಿ ನಾವು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ನಿಕಟ ಪೂರ್ವ ಮುಡಾ ಅಧ್ಯಕ್ಷ ರವಿ ಶಂಕರ್ ಮಿಜಾರ್ ಮಾತನಾಡಿ, ನಾರಾಯಣ ಗುರುಗಳ ಜೀವನ, ಅವರ ಸಂದೇಶ ಹಾಗೂ ನಮ್ಮ ಜೀವನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ಒಂದೇ ಜಾತಿ, ಒಂದೇ ಮತ ಒಂದೇ ದೇವರು ಎಂಬ ಅವರ ಸಂದೇಶ ಹಿಂದುಗಳಾದ ನಾವೆಲ್ಲರೂ ಪಾಲಿಸಬೇಕು ಎಂದು ಹೇಳಿದರು.
ರಾಜ್ಯ ಹಿಂದುಳಿದ ಮೋರ್ಚಾದ ಉಪಾಧ್ಯಕ್ಷರು, ಜಿಲ್ಲೆಯ ಪ್ರಭಾರಿ ವಿಠ್ಠಲ್ ಪೂಜಾರಿ, ಓಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ, ಶಶಿಧರ್ ಕಲ್ಮಂಜ, ಮಾಜಿ ರಾಜ್ಯ ಅರೆ ಅಲೆಮಾರಿ ನಿಗಮ ಮಂಡಳಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೋಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ನಿತಿನ್ ಕುಮಾರ್, ನಿಕಟ ಪೂರ್ವ ಮಹಾನಗರ ಪಾಲಿಕೆಯ ಮಹಾಪೌರರು, ಮ.ನ.ಪಾ. ಸದಸ್ಯರು, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪದಾಧಿಕಾರಿಗಳು, ಸದಸ್ಯರು, ಮಂಡಲ ಅಧ್ಯಕ್ಷರು ಪದಾಧಿಕಾರಿಗಳು, ಪಕ್ಷದ ಅನ್ಯನ್ಯ ಮೋರ್ಚಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಜಿಲ್ಲಾಧ್ಯಕ್ಷ ಮಹೇಶ್ ಜೋಗಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿಲ್ಲಾ ಒಬಿಸಿ ಉಪಾಧ್ಯಕ್ಷ ವಿನೋದ್ ಬೆಳ್ಳಯಾರು ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋನಪ್ಪ ವಂದಿಸಿದರು.