
ಸ್ಟೈಫಂಡ್ ಬಿಡುಗಡೆಗೆ ಆಗ್ರಹಿಸಿ ಮನವಿ
Friday, September 19, 2025
ಮಂಗಳೂರು: ಸರಕಾರಿ ವೆನ್ಲಾಕ್ ಶುಶ್ರೂಷ ಕಾಲೇಜಿನ ನೂರಾರು ವಿದ್ಯಾರ್ಥಿಗಳಿಗೆ ಬಾಕಿ ಇರಿಸಿದ ಸ್ಟೈಫಂಡ್ ಬಿಡುಗಡೆಗೆ ಮಾಡಲು ಹಾಗೂ ಹಲವು ಬಗೆಯ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ದ.ಕ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ಡಿವೈಎಫ್‌ಐ, ಎಸ್‌ಎಫ್‌ಐ ನೇತೃತ್ವದಲ್ಲಿ ಮನವಿಯನ್ನು ಸಲ್ಲಿಸಲಾಯಿತು.
ನಿಯೋಗದಲ್ಲಿ ಡಿವೈಎಫ್‌ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ವಿನುಶ ರಮಣ, ಸಂತ್ರಸ್ತ ವಿದ್ಯಾರ್ಥಿಗಳ ಪ್ರತಿನಿಧಿಸಿ ಜೋಯಲ್ ಸೆಬಾಸ್ಟಿಯನ್, ವಿನಯ್, ಮನೋಜ್ ಮಲ್ಲೇಶ್, ರಾಜಸಾಬ್ ದೊಡ್ಡಮನಿ ಮತ್ತಿತರರು ಉಪಸ್ಥಿತರಿದ್ದರು.