ಸೆ.24ರಿಂದ 26ರವೆರೆಗೆ `ಕ್ರೀಡಾ ಸಂಭ್ರಮ' 2025-ರಾಜ್ಯಮಟ್ಟದ ಕ್ರೀಡಾಕೂಟ
ಮೂಡುಬಿದಿರೆ: ದೈಹಿಕ ಶಿಕ್ಷಣ ಶಿಕ್ಷಕರು, ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಅಧಿಕಾರಿಗಳ ರಾಜ್ಯಮಟ್ಟದ ಕ್ರೀಡಾಕೂಟ `ಕ್ರೀಡಾ ಸಂಭ್ರಮ' 2025 ಸೆ.24ರಿಂದ 26ರವರೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಕಾರದೊಂದಿಗೆ ಮೂಡುಬಿದಿರೆಯಲ್ಲಿ ನಡೆಯಲಿದೆ.
ಸೆ.24ರಂದು ಸಾಯಂಕಾಲ 4 ಗಂಟೆಗೆ ಸ್ವರಾಜ್ಯ ಮೈದಾನದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಶಿವಲಿಂಗಪ್ಪ ಹೊರಟ್ಟಿ ಕ್ರೀಡಾಕೂಟ ಉದ್ಘಾಟಿಸುವರು. ವಿಧಾನಸಭಾ ಸ್ಪೀಕರ್ ಯುಟಿ.ಖಾದರ್ ಧ್ವಜಾರೋಹಣಗೈಯುವರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಂದನೆ ಸ್ವೀಕಾರ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಕ್ರೀಡಾಜ್ಯೋತಿ ಸ್ವೀಕಾರ ಮಾಡಲಿರುವರು ಹಾಗೂ ಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ ಸಾಧಕರನ್ನು ಸನ್ಮಾನಿಸುವರು. ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆವಹಿಸಲಿದ್ದು, ರಾಜ್ಯಸಭೆ, ಲೋಕಸಭೆ, ವಿಧಾನಪರಿಷತ್, ವಿಧಾನಸಭೆ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸುವರು.
ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ದ.ಕ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಂಗಳೂರು, ಜಿಲ್ಲಾ ಘಟಕ ದ.ಕ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.