
ಸೆ.24 ರಂದು ಮೂಡುಬಿದಿರೆಯಲ್ಲಿ ಬಿಜೆಪಿ ಯುವ ಮೋಚಾ೯ದಿಂದ ಬೃಹತ್ ರಕ್ತದಾನ ಶಿಬಿರ
Sunday, September 21, 2025
ಮೂಡುಬಿದಿರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನದ ಅಂಗವಾಗಿ ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ಯುವ ಮೋಚಾ೯ದಿಂದ ಸೆ. 24 ರಂದು ಮೂಡುಬಿದಿರೆಯಲ್ಲಿ ಬ್ರಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಯುವ ಮೋಚಾ೯ದ ಅಧ್ಯಕ್ಷ ಕುಮಾರ್ ಪ್ರಸಾದ್ ತೋಡಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿದ್ಯಾಗಿರಿಯ ಬಿಜೆಪಿ ಕಾಯಾ೯ಲಯದಲ್ಲಿ ನಡೆಯುವ ಈ ಶಿಬಿರವನ್ನು ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಬೆಳಿಗ್ಗೆ 9.30ಕ್ಕೆ ಉದ್ಘಾಟಿಸಲಿದ್ದಾರೆ. ಮಂಡಲದ ಅಧ್ಯಕ್ಷ ದಿನೇಶ್ ಪುತ್ರನ್ ಮತ್ತು ಇತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಪಕ್ಷದ ಅನನ್ಯ ಜವಾಬ್ದಾರಿ ಇರುವ ಪದಾಧಿಕಾರಿಗಳು, ಕಾಯ೯ಕತ೯ರು ಹಾಗೂ ಸಾವ೯ಜನಿಕರು ಭಾಗವಹಿಸುವಂತೆ ತಿಳಿಸಿದ್ದಾರೆ.