
ಆಳ್ವಾಸ್ ಸಹಕಾರ ಸಂಘದ 9ನೇ ವಾರ್ಷಿಕ ಮಹಾಸಭೆ: 3.55 ಕೋಟಿ ನಿವ್ವಳ ಲಾಭ, ಶೇ 17 ಲಾಭಾಂಶ
ಆಳ್ವಾಸ್ ಕೃಷಿಸಿರಿ ಆವರಣದಲ್ಲಿನ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಶನಿವಾರ ನಡೆದ ಸಂಘದ 2024-25 ನೇ ಸಾಲಿನ 9ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಕಟಿಸಲಾಯಿತು.
ಮುಂದಿನ ವರ್ಷಕ್ಕೆ 100 ಕೋಟಿ ಠೇವಣಿ ಸಂಗ್ರಹಿಸಿ, ಬ್ಯಾಂಕಿನ ವ್ಯವಹಾರವನ್ನು 195 ಕೋಟಿಗೆ ಹೆಚ್ಚಿಸುವ ಗುರಿ ಹೊಂದಿದೆ ಎಂದ ಅವರು ಆಳ್ವಾಸ್‌ನ ಪ್ರತಿ ಕಾಯ೯ದಲ್ಲೂ ಸಮಾಜಮುಖಿ ಚಿಂತನೆ ಒಳಗೊಂಡಿದೆ ಎಂದರು.
ಸಂಘದ ಕಾರ್ಯ ನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ ವಾರ್ಷಿಕ ವರದಿ ವಾಚಿಸಿ ಸಂಘವು ಈ ಸಾಲಿನಲ್ಲಿ 170 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಕಳೆದ ವಿತ್ತೀಯ ವರ್ಷಕ್ಕಿಂತ ಈ ವರ್ಷ 19 ಲಕ್ಷದಷ್ಟು ಹೆಚ್ಚಿನ ಲಾಭ ಗಳಿಸಿದೆ. ಶೇ 99.62 ಸಾಲ ವಸೂಲಾತಿ ಮಾಡಿದೆ. 2016ರ ಜುಲೈ 10 ರಂದು ಸಂಘ ಆರಂಭಗೊAಡಿದ್ದು, ಪ್ರಸ್ತುತ 5543 ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು.
2024-25ನೇ ಸಾಲಿನ ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದ ಟಾಪರ್‌ಗಳಾದ ಆಳ್ವಾಸ್ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ, ಪ್ರಸ್ತುತ ಪ.ಪೂ ಕಾಲೇಜಿನಲ್ಲಿ ಓದುತ್ತಿರುವ ಪಾವನಾ ಶರಣಾ ಬಸಪ್ಪ ಮೇಗೂರ್, ಹರೀಶ ಬಡಿಗೇರ್, ರಿಯಾ ವಿಧ್ಯಾದರ್ ಕಾಮ್ಟೆ, ವಿನಯ, ಮಾನ್ಯ, ಐತ್ಯಾ, ಚಿನ್ಮಯ್ ಹಾಗೂ ದ್ವಿತೀಯ ಪದವಿಪೂರ್ವ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವೈಷ್ಣವಿ ಪ್ರಸಾದ ಭಟ್ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ನಗದಿನೊಂದಿಗೆ ಅಭಿನಂದಿಸಲಾಯಿತು.
ಸಹಕಾರ ಶಿಕ್ಷಣ ನಿಧಿಯ 3,19,821 ಲಕ್ಷದ ಚೆಕ್ ಅನ್ನು ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳಿಗೆ ಮೂಡುಬಿದಿರೆಯ ಸಹಕಾರಿ ತರಬೇತಿ ಸಂಸ್ಥೆಯ ಉಪನ್ಯಾಸಕಿ ಬಿಂದು ಬಿ. ನಾಯರ್ ಮೂಲಕ ಹಸ್ತಾಂತರಿಸಲಾಯಿತು.
ಸಂಘದ ಉಪಾಧ್ಯಕ್ಷ ಎ ಮೋಹನ್ ಪಡಿವಾಳ್, ನಿರ್ದೇಶಕರುಗಳಾದ ಶ್ರೀಪತಿ ಭಟ್, ಜಯಶ್ರೀ ಅಮರನಾಥ್ ಶೆಟ್ಟಿ, ನಾರಾಯಣ ಪಿಎಂ, ವಿವೇಕ್ ಆಳ್ವ, ರಾಮಚಂದ್ರ ಮಿಜಾರು, ಪ್ರಕಾಶಿನಿ ಹೆಗ್ಡೆ, ಅಶ್ವಿನ್ ಜೊಸ್ಸಿ ಪಿರೇರಾ, ಮೀನಾಕ್ಷಿ ಉಪಸ್ಥಿತರಿದ್ದರು.
ನಿರ್ದೇಶಕ ಜಯರಾಮ್ ಕೋಟ್ಯಾನ್ ಸ್ವಾಗತಿಸಿದರು. ಆಳ್ವಾಸ್ ಪ.ಪೂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಕೆ.ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.