ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಾನಸ್ವಿ ಎಂ.ವಿ. ರಾಜ್ಯಮಟ್ಟಕ್ಕೆ ಆಯ್ಕೆ
Saturday, September 13, 2025
ಮೂಡುಬಿದಿರೆ: ಮಂಗಳೂರಿನ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪದವಿ ಪೂರ್ವ ಕಾಲೇಜಿನ ಮಾನಸ್ವಿ ಎಂ.ವಿ. ವಿನ್ನರ್ ಆಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಪಟುವನ್ನು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಅಭಿನಂದಿಸಿದ್ದಾರೆ.