ವೆಂಕಟರಮಣ ದೇವಳದಲ್ಲಿ ಶಾರದಾ ಮಹೋತ್ಸವಕ್ಕೆ ಚಾಲನೆ
Monday, September 29, 2025
ಮೂಡುಬಿದಿರೆ: ಇಲ್ಲಿನ ಶ್ರೀ ವೀರಮಾರುತಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆಯುವ 36ನೇ ವರ್ಷದ ಶ್ರೀ ಶಾರದಾ ಮಹೋತ್ಸವಕ್ಕೆ ಶ್ರೀ ವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂಟದಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ಸೋಮವಾರ ಬೆಳಗ್ಗೆ ಒಂಟಿಕಟ್ಟೆಯ ರೇವತಿ ಶೆಣೈ-ಐ ಶ್ರೀ ನಿವಾಸ ಶೆಣೈ ದಂಪತಿ ಶಾರದಾ ದೇವಿಯ ಪ್ರತಿಷ್ಠೆ ಮಾಡಿದರು. ದೇವಳದ ಆಡಳಿತ ಮೊಕ್ತೇಸರ ಜಿ.ಉಮೇಶ್ ಪೈ, ಟ್ರಸ್ಟ್ನ ಪ್ರಮುಖರು, ಭಕ್ತರು ಉಪಸ್ಥಿತರಿದ್ದರು.