ಶಿರ್ತಾಡಿಯಲ್ಲಿ ಸೀರೆ ಗೊಂಡೆ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಯೋತಿ ರಾಜ್ ಇವರು ಮಾತಾಡುತ ಮಹಿಳೆಯರು ಸ್ವ ಉದ್ಯೋಗ ಮಾಡಲು ಹೆಚ್ಚಿನ ಕೌಶಲ್ಯದ ಅಗತ್ಯವಿದ್ದು ವಿಆರ್ ಎಲ್ ಡಿ ಮಹಿಳೆಯರಿಗೆ ಬೇಕಾದ ತರಬೇತಿ ಹಾಗೂ ಬೆಂಬಲ ನೀಡಲು ಸದಾ ಸಿದ್ದವಿದೆ ಎಂದು ತಿಳಿಸಿದರು.ಮೊದಲಿಗೆ ತರಬೇತಿ ಪಡೆದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ತಿಳಿಸಿ ತರಬೇತಿಯಿಂದ ಪಡೆದ ಪ್ರಯೋಜನದ ಬಗ್ಗೆ ತಿಳಿಸಿದರು.
ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ಮಾತನಾಡಿ ತರಬೇತಿ ನಂತರ ಮಹಿಳೆಯರು ಸ್ವ ಉದ್ಯೋಗ ಮಾಡಲು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ ಶಿರ್ತಾಡಿ ಪಂಚಾಯತ್ ಅಧ್ಯಕ್ಷೆ ಅಗ್ನೇಶ್ ಡಿಸೋಜಾ ಮಾತನಾಡಿ ತರಬೇತಿಯಿಂದ ಮಹಿಳೆಯರಲ್ಲಿ ಸಕಾರಾತ್ಮಕ ಬದಲಾವಣೆ ಬಂದಿದೆ, ಇನ್ನೂ ಹೆಚ್ಚಿನ ತರಬೇತಿ ಸಂಜೀವಿನಿ ಕಟ್ಟಡದಲ್ಲಿ ನಡೆದು ಹೆಚ್ಚಿನ ಮಹಿಳೆಯರಿಗೆ ಪ್ರಯೋಜನ ಸಿಗಲಿ ಎಂದರು.
ಎನ್.ಆರ್.ಎಲ್.ಎಂ. ತಾಲೂಕು ಸಂಯೋಜಕರಾದ ನಿಖಿಲ್, ತುಳಸಿ ಒಕ್ಕೂಟದ ಅಧ್ಯಕ್ಷೆ ಸವಿತ ವೇದಿಕೆಯಲ್ಲಿದ್ದರು.
ಸುಗಂಧಿ ಸ್ವಾಗತಿಸಿದರು. ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ವಂದಿಸಿದರು.
5 ದಿನಗಳ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರಿಗೆ ಅತಿಥಿಗಳು ಪ್ರಮಾಣಪತ್ರ ನೀಡಿದರು.