ಶಿರ್ತಾಡಿಯಲ್ಲಿ ಸ್ವಚ್ಛತಾ ಅಭಿಯಾನ

ಶಿರ್ತಾಡಿಯಲ್ಲಿ ಸ್ವಚ್ಛತಾ ಅಭಿಯಾನ


ಮೂಡುಬಿದಿರೆ: ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಮೂಡುಬಿದಿರೆ ತಾಲೂಕು ರಾಷ್ಟ್ರೀಯ ಸೇವಾ ಯೋಜನೆ, ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು, ಶಿರ್ತಾಡಿ- ವಾಲ್ಪಾಡಿ ಗ್ರಾಮ ಪಂಚಾಯತ್ ಇವುಗಳ ಸಹಯೋಗದೊಂದಿಗೆ ಶಿರ್ತಾಡಿ  ಬಸ್ ನಿಲ್ದಾಣದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಗುರುವಾರ ಜರುಗಿತು.

ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಶಿಮುಂಜೆ ಗುತ್ತು ಸಂಪತ್ ಸಾಮ್ರಾಜ್ಯ ರವರು ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ಊರು ನಮ್ಮ ಪರಿಸರವನ್ನು ನಾವೇ ಸ್ವಚ್ಛವಾಗಿ ಇಟ್ಟುಕೊಂಡಾಗ ಗ್ರಾಮ ದ ಅಭಿವೃದ್ಧಿಗೆ ಒಳಿತಾಗುತ್ತದೆ ಎಂದು ಹೇಳಿದರು. 

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ ಬಿ, ಶಿರ್ತಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್ ಪ್ರವೀಣ್ ಜೈನ್, ಕಾಂಗ್ರೆಸ್ ಮುಖಂಡರಾದ ಸುರೇಶ್ ಕೋಟ್ಯಾನ್, ವಲೇರಿಯನ್ ಸಿಕ್ವೆರಾ, ಶಿರ್ತಾಡಿ ಗ್ರಾಮ ಪಂಚಾಯತ ಅಧ್ಯಕ್ಷ ಆಗ್ನೆಸ್ ಡಿಸೋಜಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ, ವಾಲ್ಪಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹುನಗುಂದ, ಪಂಚಾಯತ್ ಕಾರ್ಯದರ್ಶಿಗಳಾದ ಸುನಂದ, ದಾಮೋದರ್, ಶೇಖರ್ ಮಹಾವೀರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ವಿಜಯಲಕ್ಷ್ಮಿ ಕೆ ಮಾರ್ಲ, ಉಪನ್ಯಾಸಕಿ ಎನ್ಎಸ್ಎಸ್ ಅಧಿಕಾರಿ ರಶ್ಮಿತಾ ಭಾಗವಹಿಸಿದ್ದರು. ಜೈಸನ್ ಪಿರೇರಾ ಕಾರ್ಯಕ್ರಮ ನಿರೂಪಿಸಿದರು. ಮಹಾವೀರ ಕಾಲೇಜು ಎನ್ಎಸ್ಎಸ್ ವಿದ್ಯಾರ್ಥಿಗಳು, ಊರವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article