ತ್ರೋಬಾಲ್: ಅಳಿಯೂರು ಸರ್ಕಾರಿ ಪ್ರೌಢಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
Wednesday, September 3, 2025
ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕೆಪಿಎಸ್ ಮಿಜಾರು ಪ್ರೌಢಶಾಲೆ ಇವುಗಳ ಆಶ್ರಯದಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ 17ರ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಳಿಯೂರು ಸರ್ಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ದೈಹಿಕ ಶಿಕ್ಷಕ ಭಾಸ್ಕರ್ ಪಾಲಡ್ಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.