ಆಳ್ವಾಸ್ ಪಿಯು ಕಾಲೇಜಿನಲ್ಲಿ ಜೂನಿಯರ್ ರೆಡ್ ಕ್ರಾಸ್ ಚಟುವಟಿಕೆಗಳಿಗೆ ಚಾಲನೆ

ಆಳ್ವಾಸ್ ಪಿಯು ಕಾಲೇಜಿನಲ್ಲಿ ಜೂನಿಯರ್ ರೆಡ್ ಕ್ರಾಸ್ ಚಟುವಟಿಕೆಗಳಿಗೆ ಚಾಲನೆ


ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ 2025-26ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಉದ್ಘಾಟಿಸಲಾಯಿತು.

ಪತ್ರಕರ್ತ ಧನಂಜಯ ಮೂಡುಬಿದಿರೆ ಮಾತನಾಡಿ, ಕೆಂಪು ಬಣ್ಣವನ್ನು ಸಾಮಾನ್ಯವಾಗಿ ಭೀಕರ, ಭಯಂಕರ, ರುದ್ರ ಎಂಬ ಅರ್ಥದಲ್ಲಿ ಕಾಣಲಾಗುತ್ತದಾದರೂ, ಅದು ಮುಗ್ದತೆಯ ಸಂಕೇತವೂ ಹೌದು. ಆ ಮುಗ್ದತೆಯೊಳಗೆ ಸೇವಾ ಮನೋಭಾವವನ್ನು ರಕ್ತಗತ ಮಾಡಿಕೊಂಡಿರುವುದೇ ಜೂನಿಯರ್ ರೆಡ್ ಕ್ರಾಸ್ ಸಂಸ್ಥೆ ಎಂದರು.

ವಕೀಲ ಸಂತೋಷ್ ಪೀಟರ್ ಡಿಸೋಜ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಉಪಪ್ರಾಂಶುಪಾಲೆ ಜಾನ್ಸಿ ಪಿಎನ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮೂಡುಬಿದಿರೆ ಘಟಕದ ಕಾರ್ಯದರ್ಶಿ ರಾಜೇಂದ್ರ ಪೈ ಇದ್ದರು.

ಉಪನ್ಯಾಸಕರಾದ ಪೂರ್ಣಿಮಾ ಸ್ವಾಗತಿಸಿದರು. ವಿರಾನ್ ಕಾಯ೯ಕ್ರಮ ನಿರೂಪಿಸಿದರು.ಅಕ್ಷತಾ ಪಾಠಕ್ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article