ಮಹೇಶ್ ವಿಕ್ರಮ್ ಹೆಗ್ಡೆಗೆ ಜಾಮೀನು
Monday, September 15, 2025
ಮೂಡುಬಿದಿರೆ: ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಫೋಟೋ ಬಳಸಿ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಆರೋಪದಲ್ಲಿ ಶುಕ್ರವಾರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮಹೇಶ್ ವಿಕ್ರಮ್ ಹೆಗ್ಡೆ ಅವರಿಗೆ ಸೋಮವಾರ ಜಾಮೀನು ಮಂಜೂರಾಗಿದೆ.
ಮೂಡುಬಿದಿರೆ ನ್ಯಾಯಾಲಯದಲ್ಲಿ ವಕೀಲ ಶರತ್ ಶೆಟ್ಟಿಯವರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿ ಆದೇಶಿಸಿದೆ.
ಮಹೇಶ್ ವಿಕ್ರಮ್ ಹೆಗ್ಡೆ ಬಿಡುಗಡೆಗಾಗಿ ಭಾನುವಾರ ಮೂಡುಬಿದಿರೆ ಹನುಮಂತ ದೇವಸ್ಥಾನದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹನುಮಾನ್ ಚಾಲೀಸಾ ಪಠಿಸಿ ಪ್ರಾರ್ಥನೆ ಸಲ್ಲಿಸಿದ್ದರು.