ಮೂಡುಬಿದಿರೆ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
Thursday, September 4, 2025
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ ದ.ಕ ಜಿಲ್ಲೆ ಕೊಡಮಾಡುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ.
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಡ್ಯೋಡಿ ಮಾರ್ಪಾಡಿಯ ಶಿಕ್ಷಕಿ ಉಷಾ ಲತಾ ಹೆಗ್ಡೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಾರಿನ ಶಿಕ್ಷಕ ಹರೀಶ್ ಕೆ.ಎಂ ಹಾಗೂ ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ರತ್ನಾವತಿ ಆಚಾರ್ ಕೆ. ಆಯ್ಕೆಯಾದವರು.