ತಾಲೂಕಿನ ಸೇವಾ ಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ
Wednesday, September 10, 2025
ಮೂಡುಬಿದಿರೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಟ್ರಸ್ಟ್ ಮೂಡುಬಿದಿರೆ ತಾಲೂಕಿನ ಎಲ್ಲಾ ಗ್ರಾಮಗಳ ಸೇವಾ ಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆಯು ಸಮಾಜ ಮಂದಿರದಲ್ಲಿ ಬುಧವಾರ ನಡೆಯಿತು.
ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಅವರು ದೀಪ ಬೆಳಗಿ ಸಭೆಯನ್ನು ಉದ್ಘಾಟಿಸಿ ಪ್ರತಿ ಗ್ರಾಮಗಳ ಪ್ರಗತಿ ಪರಿಶೀಲನೆಯ ಮಾಹಿತಿಯನ್ನು ಪಡೆದುಕೊಂಡರು.
ದ.ಕ. ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ಅವರು ಇತರ ಮಾಹಿತಿಗಳನ್ನು ಪಡೆದುಕೊಂಡರು. ವೇದಿಕೆಯಲ್ಲಿ ರಿಕವರಿ ಯೋಜನಾಧಿಕಾರಿ ಆನಂದ, ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ಧನಂಜಯ ಬಿ. ಆಲಂಗಾರು ವಲಯದ ಮೇಲ್ವೀಚಾರಕ ಚಂದ್ರಹಾಸ ಉಪಸ್ಥಿತರಿದ್ದರು.
ಲೆಕ್ಕ ಪರಿವೀಕ್ಷಕ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.
