ಇರುವೈಲು ಮುಳಿಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ
Wednesday, September 17, 2025
ಮೂಡುಬಿದಿರೆ: ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹದಂಗವಾಗಿ ದ.ಕ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರ ಸಹಭಾಗಿತ್ವದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ಇರುವೈಲು ಗ್ರಾಪಂ ವ್ಯಾಪ್ತಿಯ ಐದು ಅಂಗನವಾಡಿ ಕೇಂದ್ರಗಳ ನೇತೃತ್ವದಲ್ಲಿ ಮುಳಿಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಕಾಯ೯ಕ್ರಮ ನಡೆಯಿತು.
ಇರುವೈಲು ಗ್ರಾಪಂ ಸದಸ್ಯ ವಲೇರಿಯನ್ ಕುಟಿನ್ಹ ಉದ್ಘಾಟಿಸಿದರು.
ಬಡಗ ಎಡಪದವು ಗ್ರಾಪಂ ಉಪಾಧ್ಯಕ್ಷ ಚಂದ್ರಹಾಸ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಪುಷ್ಪಲತಾ, ಸಿ.ಎಚ್.ಓ ಲೆನಿಟಾ, ಪಿ.ಎಚ್.ಸಿ.ಓ ಗೀತಾ, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ವೀಣಾ ನಿರೂಪಿಸಿದರು. ರೇಣುಕಾ ವಂದಿಸಿದರು.