
ಆಳ್ವಾಸ್ ಪ.ಪೂ ಕಾಲೇಜು: ರೋವರ್ಸ್–ರೇಂಜರ್ಸ್ ಘಟಕದ ಚಟುವಟಿಕೆಗಳ ಉದ್ಘಾಟನೆ
ಅವರು ಆಳ್ವಾಸ್ ಪದವಿಪೂರ್ವ ಕಾಲೇಜಿನ 2025-26ನೇ ಸಾಲಿನ ರೋವರ್ಸ್ ಹಾಗೂ ರೇಂಜರ್ಸ್ ಘಟಕದ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ದಿನಗಳಲ್ಲಿ ಸ್ವಯಂಹಾನಿ ಹಾಗೂ ಆತ್ಮಹತ್ಯೆಯ ಪ್ರವೃತ್ತಿಗಳು ದಿನೇದಿನೇ ಹೆಚ್ಚುತ್ತಿವೆ. ವಿಶೇಷವಾಗಿ ವಿದ್ಯಾವಂತರೇ ಜೀವನದ ನಿಜವಾದ ಮೌಲ್ಯ ಅರಿಯದೆ ಆತ್ಮಹತ್ಯೆಯಂತಹ ದುರಂತ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೋವರ್ಸ್–ರೇಂಜರ್ಸ್ ಘಟಕದಲ್ಲಿ ತೊಡಗಿಸಿಕೊಳ್ಳುವಿಕೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ಧೈರ್ಯ ಬೆಳೆಸುವ ಮೂಲಕ ಸವಾಲುಗಳನ್ನು ಎದುರಿಸಲು ಪ್ರೇರೇಪಿಸುತ್ತದೆ ಎಂದರು.
ಆಳ್ವಾಸ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ಸದಾಕತ್ ಅಧ್ಯಕ್ಷತೆ ವಹೀಸಿ ಮಾತನಾಡಿ “ರೋವರ್ಸ್–ರೇಂಜರ್ಸ್ ಕೇವಲ ಪಠ್ಯೇತರ ಚಟುವಟಿಕೆ ಅಲ್ಲ. ಅದು ಬದುಕು ಸಾಗಿಸುವ ಒಂದು ವಿಧಾನ. ಆ ಮೂಲಕ ವಿದ್ಯಾರ್ಥಿಗಳು ಸೇವಾಭಾವವನ್ನು ಅರಿತುಕೊಳ್ಳುತ್ತಾರೆ. ಸಮಾಜದ ಕಡೆ ಹೊಣೆಗಾರಿಕೆಯನ್ನು ಬೆಳೆಸುತ್ತಾರೆ. ತಂಡದಲ್ಲಿ ಕೆಲಸ ಮಾಡುವ ಗುಣ, ನಾಯಕತ್ವ, ಶಿಸ್ತು, ಸಮಯಪಾಲನೆ ಇವುಗಳು ಅವರ ವ್ಯಕ್ತಿತ್ವವನ್ನು ಬಲಪಡಿಸುತ್ತವೆ ಎಂದರು.
ವಿದ್ಯಾರ್ಥಿಗಳು ರೋವರ್ಸ್–ರೇಂಜರ್ಸ್ನ ಕುರಿತ ನಾಟಕವನ್ನು ಪ್ರದರ್ಶಿಸಿದರು.
ಆಳ್ವಾಸ್ ಪ.ಪೂ ಕಾಲೇಜಿನ ಉಪಪ್ರಾಂಶುಪಾಲೆ ಜಾನ್ಸಿ ಪಿಎನ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂಡಿ, ರೋವರ್ ಸ್ಕೌಟ್ ಲೀಡರ್ ಸುನಿಲ್, ರೇಂಜರ್ ಲೀಡರ್ ವೀಣಾ ಆಗ್ನೇಸ್ ಡಿಸೋಜಾ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಕಿರಣ್ ಸ್ವಾಗತಿಸಿ, ಪೌರವಿ ಅತಿಥಿಗಳನ್ನು ಪರಿಚಯಿಸಿದರು. ಸಿದ್ದೇಶ್ ಕಾಯ೯ಕ್ರಮ ನಿರೂಪಿಸಿದರು. ಶ್ರೇಯ ವಂದಿಸಿದರು.