
ಆಳ್ವಾಸ್ ಟೆಕ್ ಪಾರ್ಕ್‌ನಲ್ಲಿ ಸ್ವಿಚ್‌ಗೇರ್ ಕಂಪನಿ ಶಾಖೆ ಉದ್ಘಾಟನೆ
ಎಸ್‌ಸಿಟಿಪಿಎಲ್‌ನ ನಿರ್ದೇಶಕ ಹರ್ಷಿತ್ ಶೆಟ್ಟಿ ಮಾತನಾಡಿ, ನಮ್ಮ ಕಂಪನಿ 2004ರಲ್ಲಿ ಸ್ಥಾಪನೆಯಾದ ಭಾರತೀಯ ಸಂಸ್ಥೆಯಾಗಿದ್ದು, ಲೋ ಮತ್ತು ಮಿಡಿಯಂ ವೋಲ್ಟೇಜ್ ಸ್ವಿಚ್‌ಬೋರ್ಡ್‌ಗಳು, ಬಸ್‌ವೇ ವ್ಯವಸ್ಥೆಗಳು ಹಾಗೂ ಶೀಟ್ ಮೆಟಲ್ ಎನ್‌ಕ್ಲೋಸರ್ ತಯಾರಿಕೆಯಲ್ಲಿ ಪರಿಣತಿ ಹೊಂದಿದೆ. ವಿದ್ಯುತ್ ವಿತರಣೆ, ಶಕ್ತಿ ನಿರ್ವಹಣೆ ಮತ್ತು ಕೈಗಾರಿಕಾ ಸ್ವಯಂಚಾಲಿತ ಪರಿಹಾರಗಳಲ್ಲಿ ಕಂಪನಿಯು ಸಮಗ್ರ ಸೇವೆಗಳನ್ನು ನೀಡುತ್ತಿದೆ ಎಂದು ತಿಳಿಸಿದರು.
ಸದ್ಯ 100 ಕೋಟಿ ವ್ಯವಹಾರ ನಡೆಸುತ್ತಿದ್ದು, ಮುಂದಿನ ವರ್ಷಗಳಲ್ಲಿ 1000 ಕೋಟಿಯ ವ್ಯವಹಾರ ವೃದ್ಧಿಸುವ ಗುರಿಯಿದೆ ಎಂದರು. ಮೂಡುಬಿದಿರೆಯಲ್ಲಿ ಆರಂಭಗೊಂಡ ಈ ಘಟಕವನ್ನು ಮಿನಿಯೇಚರ್ (ಕಂಪನಿಯ ಉತ್ಪನ್ನಗಳ ಸಣ್ಣ ರೂಪ) ತಯಾರಿಕಾ ಕೇಂದ್ರವಾಗಿ ಬಳಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕೆಲಸದ ಅನುಭವ ದೊರೆಯಲಿದ್ದು, ತರಬೇತಿ ಪಡೆಯುವಾಗಲೇ ಸಂಪಾದನೆ ಮಾಡುವ ಅವಕಾಶವೂ ಸಿಗಲಿದೆ. ಇಲ್ಲಿ ತರಬೇತಿ ಪಡೆಯುವವರು ಭವಿಷ್ಯದಲ್ಲಿ ಹೊಸದಾಗಿ ಸೇರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದ ಹರ್ಷಿತ್ ಶೆಟ್ಟಿ, ತನ್ನ ಇಂದಿನ ಸಾಧನೆಗೆ ಡಾ. ಎಂ. ಮೋಹನ ಆಳ್ವರಿಂದ ಕಲಿತ ಸಮಯಪಾಲನೆ, ಶಿಸ್ತು ಮತ್ತು ಪರಿಶ್ರಮವೇ ಮೂಲಾಧಾರ ಎಂದರು.
ಕಾರ್ಯಕ್ರಮದಲ್ಲಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚರ್ಯ ಡಾ. ಪೀಟರ್ ಫೆರ್ನಾಂಡೀಸ್, ಎಸ್‌ಸಿಟಿಪಿಎಲ್‌ನ ನಿರ್ದೇಶಕ ವಿನಯ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉದ್ಯಮಶೀಲಾ ಅಭಿವೃದ್ಧಿ ಕೋಶದ ಮುಖ್ಯಸ್ಥ ವೇಣುರಾವ್ ದೇವ್, ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಡಾ ಕುಮಾರಸ್ವಾಮಿ ಹಾಗೂ ಶ್ರೀನಿವಾಸ ಇದ್ದರು.