ಶ್ರೀ ಮಹಾವೀರ ಕಾಲೇಜಿನಲ್ಲಿ ಎಐ ಮತ್ತು ಕೋಡಿಂಗ್ ಬೂಟ್ ಶಿಬಿರ
ಮೂಡುಬಿದಿರೆ: ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ವಿಶೇಷ ಎಐ ಮತ್ತು ಕೋಡಿಂಗ್ ಬೂಟ್ ಶಿಬಿರ ಸೆಪ್ಟೆಂಬರ್ 22 ರಿಂದ 27 ರ ತನಕ ನಡೆಯಲಿದೆ.
ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಉದ್ಘಾಟಿಸಲಿದ್ದಾರೆ. ಮಾಹೆ ಪ್ರೊ ಚಾನ್ಸಲರ್ ಹಾಗೂ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಅಧ್ಯಕ್ಷ ಡಾ.ಹೆಚ್.ಎಸ್. ಬಲ್ಲಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ ೨೭ ರಂದು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ವಿಭಾಗದ ಶಿಕ್ಷಕರಿಗಾಗಿ ವಿಶೇಷ ಕಾರ್ಯಾಗಾರ ನಡೆಯಲಿದೆ. ಈ ಬೂಟ್ ಶಿಬಿರದ ಉದ್ದೇಶವು ವಿದ್ಯಾರ್ಥಿಗಳಿಗೆ ಕೃತಕ ಬುದ್ದಿಮತ್ತೆ ಮತ್ತು ಕೋಡಿಂಗ್ ಕ್ಷೇತ್ರದಲ್ಲಿ ಅನುಭವಾತ್ಮಕ ಜ್ಞಾನ ನೀಡುವುದರೊಂದಿಗೆ ಅವರ ಭವಿಷ್ಯದ ಶೈಕ್ಷಣಿಕ ಮತ್ತು ವೃತ್ತಿ ಜೀವನಕ್ಕೆ ದೃಢವಾದ ಅಡಿಪಾಯವನ್ನು ಕಲ್ಪಿಸುವುದಾಗಿದೆ ಎಂಬುದಾಗಿ ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಪ್ರಕಟಣೆಯಲ್ಲಿ ತಿಳಿಸಿದರು.