ಬಾಲಕ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ
Saturday, September 13, 2025
ಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಜಿಲ್ಲೆ ಮತ್ತು ಮೂಡುಬಿದಿರೆಯ ಶ್ರೀ ಮಹಾವೀರ ಪದವಿಪೂರ್ವ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟವು ಕಾಲೇಜಿನ ಜಿ.ವಿ.ಪೈ ಕ್ರೀಡಾಂಗಣದಲ್ಲಿ ನೆರವೇರಿತು.
ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಉದ್ಯಮಿ ಪುನಿತ್ ಪೂಜಾರಿಯವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, “ಸೋಲು-ಗೆಲುವು ಎನ್ನುವುದು ಪ್ರತಿಯೊಂದು ಕ್ರೀಡೆಯಲ್ಲಿಯೂ ಇದೆ. ನಿರಂತರ ಪ್ರಯತ್ನದಿಂದ ಗೆಲುವು ಸಾಧ್ಯ” ಎಂದು ಕ್ರೀಡಾಳುಗಳಿಗೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಕೆ. ಅಭಯಚಂದ್ರ ಜೈನ್ ಮಾತನಾಡಿ, ಒಳ್ಳೆಯ ಕ್ರೀಡಾ ಪಟುಗಳಾಗಿ, ಮಾದರಿ ಕ್ರೀಡಾಪಟುಗಳಾಗಿ ಮೂಡಿಬರಬೇಕು ಎಂದು ಹಾರೈಸಿದರು.
ವೇದಿಕೆಯಲ್ಲಿ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ, ಎಂ.ಕೆ. ಅನಂತ್ರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ, ಮೂಡುಬಿದಿರೆ ತಾಲೂಕು ಕ್ರೀಡಾ ಸಂಯೋಜಕರಾದ ನವೀನ್ ಎಂ. ಹೆಗ್ಡೆ ಉಪಸ್ಥಿತರಿದ್ದರು.


