ಪಡುಕೊಣಾಜೆಯಲ್ಲಿ ಹೈನುಗಾರಿಕೆ ತರಬೇತಿ
Friday, September 26, 2025
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮೂಡುಬಿದಿರೆ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಪಡುಕೊಣಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ಹೈನುಗಾರಿಕೆ ತರಬೇತಿ ನಡೆಯಿತು.
ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಧರ್ಮರಾಜ್ ಭಂಗ ತರಬೇತಿಯ ಅಧ್ಯಕ್ಷತೆಯನ್ನು ವಹಿಸಿದ್ದರು.
ಪಶು ವೈದ್ಯರಾದ ಡಾ. ಮಲ್ಲಿಕಾರ್ಜುನ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.
ಸೇವಾಪ್ರತಿನಿಧಿ ಶಶಿರೇಖಾ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ಲೋಕೇಶ್ ಪಿ. ಎಂ ಕಾಯ೯ಕ್ ನಿರೂಪಿಸಿ, ವಂದಿಸಿದರು.