ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ
ರೋಟರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಾರಾಯಣ ಪಿ.ಎಂ.ಅವರು ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜಿಲ್ಲಾ ಸ್ಕೌಟ್ & ಗೈಡ್ಸ್ ಕಮಿಷನರ್ ಆಗಿದ್ದ ಎನ್.ಜಿ.ಮೋಹನ್ ಅವರು ಮಾದಕ ವ್ಯಸನಗಳ ಜಾಗೃತಿ ಬಗ್ಗೆ ಮಾಹಿತಿ ನೀಡಿ ಮಕ್ಕಳಲ್ಲಿ ಕಂಡುಬರುವ ಮಾದಕ ದ್ರವ್ಯ ವ್ಯಸನಗಳ ಚಟವನ್ನು ಹೋಗಲಾಡಿಸಲು ಶಿಕ್ಷಕರು ಯಾವ ರೀತಿಯ ಕ್ರಮ ಕೃಗೊಳ್ಳಬಹುದೆಂಬುದನ್ನು ತಿಳಿಸಿಕೊಟ್ಟರು.
ಸಂಪನ್ಮೂಲ ವ್ಯಕ್ತಿ, ಎಮ.ಆರ್.ಪಿ.ಎಲ್. ನಿವೃತ್ತ ಜನರಲ್ ಮ್ಯಾನೇಜರ್ ಸಂತೋಷ್ ಕುಮಾರ್ ಕದ್ರಿ ಅವರು ಮಾದಕ ವ್ಯಸನಮುಕ್ತ ಸಮಾಜವನ್ನಾಗಿಸುವ ನಮ್ಮೆಲ್ಲರ ಜವಾಬ್ದಾರಿಯ ಬಗ್ಗೆ ಅರಿವು ಮೂಡಿಸಿದರು.
ಮತ್ತೋರ್ವ ಸಂಪನ್ಮೂಲ ವ್ಯಕ್ತಿ, ನ್ಯಾಯವಾದಿ ದಯಾನಂದ ಕೋಟ್ಯಾನ್ ಅವರು ಮಾತನಾಡಿ, ‘ಎಲ್ಲಾ ಧರ್ಮಗಳ ಸಾರವಾಗಿರುವ ಸಾಮಾಜಿಕ ಸಾಮರಸ್ಯದ ಬಗ್ಗೆ ವಿವರವಾಗಿ ಮಾತನಾಡಿ ಮಾಧ್ಯಮಗಳ ವೈಭವೀಕರಣ, ನೆರೆಕರೆಯವರೊಂದಿಗಿನ ಸಂಬಂಧ, ಭ್ರಾತೃತ್ವ ಭಾವನೆ ಮೊದಲಾದ ವಿಷಯಗಳ ಬಗ್ಗೆ ಮಾತನಾಡಿ ಪರಸ್ಪರ ಭ್ರಾತೃತ್ವದ ಭಾವನೆ ಬೆಳೆಸಿಕೊಂಡು ಬದುಕಬೇಕು’ ಎಂಬ ಕಿವಿಮಾತನ್ನು ಹೇಳಿದರು.
ವಿದ್ಯಾರ್ಥಿಗಳಲ್ಲಿ ಜಾತೀಯತೆ ಎಂಬ ವಿಷಬೀಜ ಮೊಳಕೆಯೊಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರದ್ದು,ವಿದ್ಯಾರ್ಥಿಗಳಲ್ಲಿ ಸಹಬಾಳ್ವೆಯ ಗುಷಗಳನ್ನು ಬೆಳೆಸಿಕೊಳ್ಳುವಂತೆ ನೋಡಿಕೊಳ್ಳಬೇಕೆಂದೂ ಅವರು ಹೇಳಿದರು.
ರೋಟರಿ ಶಿಕ್ಷಕ ಸಂಸ್ಥೆಯ ಸಂಚಾಲಕರಾದ ಜೆ.ಡಬ್ಲ್ಯೂ.ಪಿಂಟೊ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ತಿಲಕಾ ಅನಂತವೀರ್ ಜೈನ್, ರೋಟರಿ ಸಿ.ಬಿ.ಎಸ್.ಇ. ವಿಭಾಗದ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿ ಮರಾಠೆ,ರೋಟರಿ ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ರವಿ ಕುಮಾರ್ ಹಾಗೂ ಆಡಳಿತಾಧಿಕಾರಿ ಪ್ರಫುಲ್ ಡಿಸೋಜ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ,ಫೋರಂ ಫಾರ್ ಜಸ್ಟೀಸ್ ಸಂಸ್ಥೆಯ ಕಾರ್ಯದರ್ಶಿ ಪ್ರವೀಣ್ ಚಂದ್ರ ಜೈನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಹಿರಿಯ ಸಂಯೋಜಕ ಗಜಾನನ ಮರಾಠೆ ವಂದಿಸಿದರು. ಶಿಕ್ಷಕಿಯರಾದ ಪ್ರೀತಿಕಾ ಹಾಗೂ ವಿನಯಾ ಕಾರ್ಯಕ್ರಮ ನಿರೂಪಿಸಿದರು.