ದೈಹಿಕ ಶಿಕ್ಷಣ ಶಿಕ್ಷಕರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಯು.ಟಿ ಖಾದರ್ ಚಾಲನೆ
ನಂತರ ಮಾತನಾಡಿದ ಖಾದರ್ ಅವರು,ಭವಿಷ್ಯದ ಕ್ರೀಡಾಪಟುಗಳನ್ನು ರೂಪಿಸುವಲ್ಲಿ ದೈಹಿಕ ಶಿಕ್ಷಕರ ಪಾತ್ರ ಮಹತ್ವದಾಗಿದೆ. ದೈಹಿಕ ಶಿಕ್ಷಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪ್ರಯತ್ನಿಸುವುದಾಗಿ ತಿಳಿಸಿದರು.
ವಿಧಾನ ಪರಿಷತ್ತು ಸದಸ್ಯ. ಎಸ್.ಎಲ್ ಭೋಜೆಗೌಡ ಮಾತನಾಡಿ, ಸರ್ಕಾರವು ಸರ್ಕಾರಿ ಪಿಯು ಕಾಲೇಜುಗಳಲ್ಲಿ ಶಿಕ್ಷಕರನ್ನು ನೇಮಿಸದಿದ್ದರೆ ಒಲಂಪಿಕ್ ಗೆ ಹೊಸ ಕ್ರೀಡಾಪಟುಗಳನ್ನು ಸಿದ್ಧಪಡಿಸುವುದು ಹೇಗೆ ಎಂದು ಪ್ರಶ್ನಿಸಿದ ಅವರು ದೈಹಿಕ ಶಿಕ್ಷಕರ ಬೇಡಿಕೆ ಈಡೇರುವವರೆಗೆ ನಿಮ್ಮೊಂದಿಗೆ ಇರುವುದಾಗಿ ಭರವಸೆ ನೀಡಿದರು.
ಶಾಸಕ ಉಮಾನಾಥ ಎ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ದೈಹಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚೌಡಪ್ಪ ದೈಹಿಕ ಶಿಕ್ಷಕರ ಬೇಡಿಕೆಗಳನ್ನು ಸಭೆಯಲ್ಲಿ ಮಂಡಿಸಿದರು.
ಮಾಜಿ ಸಚಿವ ಅಭಯಚಂದ್ರ ಜೈನ್, ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್, ಮುಖ್ಯಾಧಿಕಾರಿ ಇಂದು ಎಂ, ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್,ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಅಲ್ಪಸಂಖ್ಯಾತರ ಇಲಾಖೆಯ ನಿರ್ದೇಶಕಿ ಭಾರತಿ, ಕ್ರೀಡಾ ಇಲಾಖೆಯ ಜಂಟಿ ನಿರ್ದೇಶಕ ನರಸಿಂಹಯ್ಯ, ಕ್ರೀಡಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಾಮ್ ಪ್ರಸಾದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕ ಪ್ರದೀಪ್ ಡಿಸೋಜ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷೆ ಲಿಲ್ಲಿ ಪಾಯಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಪ.ಪೂ ಶಿಕ್ಷಕರ ಸಂಘದ ಅಧ್ಯಕ್ಷ ರಾಧಾಕೃಷ್ಣ, ಪ್ರೇಮನಾಥ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಡಿ.ಡಿ.ಪಿ.ಐ ಶಶಿಧರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೀವ್ ನಾಯಕ್ ಹಾಗೂ ಮೋಹನ್ ಶಿರ್ಲಾಲು ಕಾರ್ಯಕ್ರಮ ನಿರ್ವಹಿಸಿದರು.