ಮುಡಿಪು ಸರ್ಕಾರಿ ಕಾಲೇಜಿನಲ್ಲಿ ಎನ್‌ಎಸ್‌ಎಸ್ ದಿನಾಚರಣೆ
Thursday, September 25, 2025
ಮುಡಿಪು: ಮುಡಿಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್‌ಎಸ್‌ಎಸ್ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಮುಡಿಪು, ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಶೀನ ಶೆಟ್ಟಿ ಅವರು ಹಾಗೂ ಕೃಷ್ಣ ಮೂಲ್ಯ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾ ಅಧಿಕಾರಿ ಹಾಗೂ ಸಹಾಯಕ ಪ್ರಾಧ್ಯಾಪಕ ಚೈತ್ರ ಎನ್.ವಿ. ಭಾಗವಹಿಸಿ ತಮ್ಮ ಎನ್‌ಎಸ್‌ಎಸ್ ಅನುಭವವನ್ನು ಹಂಚಿಕೊಂಡರು.
ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ಶೇಷಪ್ಪ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ರಾ.ಸೇ. ಯೋಜನೆಯ ಸ್ವಯಂ ಸೇವಕರು ಹಾಗೂ ತೃತೀಯ ವರ್ಷದ ವಿದ್ಯಾರ್ಥಿನಿಯರು ಕಾಲೇಜಿಗೆ ಹೂವಿನ ಗಿಡಗಳನ್ನು ಕೊಡುಗೆಯಾಗಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಸತೀಶ್ ಗಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಚೈತ್ರ ಕಾರ್ಯಕ್ರಮವನ್ನು ನಿರೂಪಿಸಿದರು. ತಸ್ರೀನಾ ಸ್ವಾಗತಿಸಿ, ರಾ.ಸೇ. ಯೋಜನಾಧಿಕಾರಿ ತನುಜ ಎಂ. ವಂದಿಸಿದರು.