ಆತ್ಮಸಂತೃಪ್ತಿ ನೀಡುವ ಸೇವೆ ನಮ್ಮಿಂದಾಗಲಿ: ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ
ಅವರು ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ನಡೆದ ಎನ್ಎಸ್ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಜೀವನದಲ್ಲಿ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು. ಎನ್ಎಸ್ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳ ಬೆಳವಣಿಗೆ ಸಾಧ್ಯ ಎಂದು ನುಡಿದರು.
ಎನ್ಎಸ್ಎಸ್ ಅಧಿಕಾರಿ ಪುಷ್ಪ ಎನ್. ಸ್ವಾಗತಿಸಿ, ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಜಿ. ಲವಿಕ ಅವರು ವಂದಿಸಿದರು. ಎನ್ಎಸ್ಎಸ್ ವಿದ್ಯಾರ್ಥಿಗಳಾದ ಅಪರ್ಣ ಮತ್ತು ತಂಡದವರು ಪ್ರಾರ್ಥಿಸಿ, ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಸುಷ್ಮಾ ವಾಗ್ಲೆ ಕೆ.ವೈ. ನಿರೂಪಿಸಿದರು.
ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ ಎಂ., ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈ, ಯಕ್ಷಕಲಾ ಕೇಂದ್ರದ ನಿರ್ದೇಶಕ ಪ್ರಶಾಂತ್ ರೈ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಾಧಾಕೃಷ್ಣ ಗೌಡ ವಿ., ಉಪನ್ಯಾಸಕರಾದ ಡಾ. ನಾರ್ಬಟ್ ಮಸ್ಕರೇನಸ್, ಧನ್ಯ ಪಿ.ಟಿ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸುಂದರ ಸಾಂಸ್ಕೃತಿಕ ಕಾರ್ಯಕ್ರಮವೂ ನೆರವೇರಿತು.