ಆತ್ಮಸಂತೃಪ್ತಿ ನೀಡುವ ಸೇವೆ ನಮ್ಮಿಂದಾಗಲಿ: ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ

ಆತ್ಮಸಂತೃಪ್ತಿ ನೀಡುವ ಸೇವೆ ನಮ್ಮಿಂದಾಗಲಿ: ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ


ಪುತ್ತೂರು: ವಿದ್ಯಾರ್ಥಿಗಳು ಸಮಾಜದ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳನ್ನು ಪರಿಹರಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಎನ್‌ಎಸ್‌ಎಸ್ ಚಟುವಟಿಕೆಗಳು ಕೇವಲ ಪಠ್ಯೇತರ ಚಟುವಟಿಕೆಗಳಲ್ಲ, ಬದಲಾಗಿ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಎಸ್‌ಡಿಎಂ ಉಜಿರೆ ಕಾಲೇಜಿನ ಉಪನ್ಯಾಸಕ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಹೇಳಿದರು.

ಅವರು ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ನಡೆದ ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅವರು, ‘ಮಾನವಕುಲಕ್ಕೆ ಸೇವೆ ಸಲ್ಲಿಸುವುದು ಅತ್ಯಂತ ಶ್ರೇಷ್ಠ ಕಾರ್ಯ. ಸೇವೆಯು ಕೇವಲ ಪ್ರದರ್ಶನಕ್ಕಾಗಲ್ಲ, ಬದಲಾಗಿ ಹೃದಯಪೂರ್ವಕವಾಗಿ ಇರಬೇಕು’ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಸೇವೆ ಮಾಡುವ ಮೂಲಕ ಸಮಾಜವನ್ನು ಉತ್ತಮಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.


ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ. ಚಂದ್ರಶೇಖರ್ ಕೆ. ಅವರು ತಮ್ಮ ಪ್ರಸ್ತಾವಿಕ ಭಾಷಣದಲ್ಲಿ, ‘ಯಾವುದೇ ವೈಫಲ್ಯವನ್ನು ಯಶಸ್ಸಿಗೆ ಮೆಟ್ಟಿಲು ಎಂದು ಪರಿಗಣಿಸಬೇಕು’ ಎಂದು ಹೇಳಿದರು. 

ಜೀವನದಲ್ಲಿ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು. ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳ ಬೆಳವಣಿಗೆ ಸಾಧ್ಯ ಎಂದು ನುಡಿದರು.

ಎನ್‌ಎಸ್‌ಎಸ್ ಅಧಿಕಾರಿ ಪುಷ್ಪ ಎನ್. ಸ್ವಾಗತಿಸಿ, ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಜಿ. ಲವಿಕ ಅವರು ವಂದಿಸಿದರು. ಎನ್‌ಎಸ್‌ಎಸ್ ವಿದ್ಯಾರ್ಥಿಗಳಾದ ಅಪರ್ಣ ಮತ್ತು ತಂಡದವರು ಪ್ರಾರ್ಥಿಸಿ, ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಸುಷ್ಮಾ ವಾಗ್ಲೆ ಕೆ.ವೈ. ನಿರೂಪಿಸಿದರು. 

ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ ಎಂ., ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈ, ಯಕ್ಷಕಲಾ ಕೇಂದ್ರದ ನಿರ್ದೇಶಕ ಪ್ರಶಾಂತ್ ರೈ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಾಧಾಕೃಷ್ಣ ಗೌಡ ವಿ., ಉಪನ್ಯಾಸಕರಾದ ಡಾ. ನಾರ್ಬಟ್ ಮಸ್ಕರೇನಸ್, ಧನ್ಯ ಪಿ.ಟಿ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸುಂದರ ಸಾಂಸ್ಕೃತಿಕ ಕಾರ್ಯಕ್ರಮವೂ ನೆರವೇರಿತು.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article