ಸಂತ ಫಿಲೋಮಿನಾ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
Friday, September 12, 2025
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ.ಕ ಜಿಲ್ಲೆ ಮಂಗಳೂರು ಇದರ ಆಶ್ರಯದಲ್ಲಿ ಸೆ.10 ರಂದು ಮಂಗಳೂರಿನ ಸಂತ ಅಲೋಶಿಯಸ್ ಪ.ಪೂ. ಕಾಲೇಜಿನಲ್ಲಿ ನಡೆದ ‘ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆ 2025-26’ರಲ್ಲಿ ಸಂತ ಫಿಲೋಮಿನಾ ಪ.ಪೂ ಕಾಲೇಜಿನ ಐದು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ದ್ವಿತೀಯ ವಿಜ್ಞಾನ ವಿಭಾಗದ ಪ್ರಾಧಿ ಕ್ಲಾರೆ ಪಿಂಟೋ 3 ಚಿನ್ನ, ದಿಗಂತ್ ವಿ.ಎಸ್. 2 ಚಿನ್ನ ಮತ್ತು 2 ಬೆಳ್ಳಿ, ಅನ್ವಿತ್ ರೈ 2 ಚಿನ್ನ ಮತ್ತು 2 ಬೆಳ್ಳಿ, ಆರ್. ಅಮನ್ ರಾಜ್ 3 ಬೆಳ್ಳಿ ಮತ್ತು 1 ಕಂಚು ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ತನುಶ್ರೀ ಎಸ್. ಗೌಡ 2 ಬೆಳ್ಳಿ ಮತ್ತು 1 ಕಂಚು ಪದಕವನ್ನು ಪಡೆದುಕೊಂಡು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ದ್ವಿತೀಯ ವಿಜ್ಞಾನ ವಿಭಾಗದ ಅಧೀನ್ ರೈ ಬಿ. 1 ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ.
ಇವರುಗಳಿಗೆ ಈಜು ತರಬೇತುದಾರರಾದ ಪಾರ್ಥ ವಾರಣಾಸಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.