ವೈಟ್ ಲಿಫ್ಟಿಂಗ್ ಸ್ಪರ್ಧೆ: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದಿಶಾನ್ ಎಂ.ಗೆ ಪ್ರಶಸ್ತಿ
Monday, September 15, 2025
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, MY bharath ದಕ್ಷಿಣ ಕನ್ನಡ, ಜಿಲ್ಲಾ ಯುವ ಜನ ಒಕ್ಕೂಟ(ರಿ) ಹಾಗೂ ವಿವಿಧ ಸಂಘ ಸಂಸ್ಥೆಗಳು ಇದರ ಸಂಯುಕ್ತ ಆಶ್ರಯದಲ್ಲಿ ಸೆ.೧೩ ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ೨೦೨೫-೨೬’ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ. ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರು ಆರ್ಯಾಪು ನಿವಾಸಿ ಬಾಬು ಮರಿಕೆ ಹಾಗೂ ಪವಿತ್ರಾ ಎಂ. ದಂಪತಿಗಳ ಪುತ್ರ. ಇವರಿಗೆ ಅಶ್ವತ್ ಕೆ.ಎಸ್. ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.