ದಸರಾ ಕ್ರೀಡಾಕೂಟ: ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳಿಗೆ ಪ್ರಶಸ್ತಿ

ದಸರಾ ಕ್ರೀಡಾಕೂಟ: ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳಿಗೆ ಪ್ರಶಸ್ತಿ


ಪುತ್ತೂರು: ಕರ್ನಾಟಕ ಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಸ.13 ಮತ್ತು 14 ರಂದು ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ವಿದ್ಯಾರ್ಥಿಗಳು ವೈಟ್ ಲಿಫ್ಟಿಂಗ್ ಮತ್ತು ರಿಲೇಯಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ವಿಭಾಗದ 4*100 ಮೀ ರಿಲೇಯಲ್ಲಿ ಕಾಲೇಜಿನ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಚೈತ್ರಿಕಾ ಅವರು ಚಿನ್ನದ ಪದಕವನ್ನು ಪಡೆದು ಕೊಂಡಿದ್ದಾರೆ.


ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಮಹಿಳೆಯರ ವಿಭಾಗದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಾಲೇಜಿನ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಸ್ಪಂದನಾ ಕೆ. ಅವರು 48 ಕೆಜಿ ವಿಭಾಗದಲ್ಲಿ ಬೆಳ್ಳಿ, ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ದೃಶ್ಯ ಕೆ.ವಿ. 53 ಕೆಜಿ ವಿಭಾಗದಲ್ಲಿ ಬೆಳ್ಳಿ, ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಚಮೀಶ ಯು. 68 ಕೆಜಿ ವಿಭಾಗದಲ್ಲಿ ಕಂಚು, ಹಾಗೂ ಪುರುಷರ ವಿಭಾಗದ ವೈಟ್ ಲಿಫ್ಟಿಂಗ್ 110 ಕೆಜಿ ವಿಭಾಗದಲ್ಲಿ ತೃತೀಯ ಬಿಎ ವಿದ್ಯಾರ್ಥಿ ರಂಜಿತ್ ಬೆಳ್ಳಿ ಪದಕಗಳನ್ನು ಪಡೆದುಕೊಂಡಿದ್ದಾರೆ. ಸ್ಪಂದನಾ ಕೆ., ದೃಶ್ಯ ಕೆ.ವಿ., ಚೈತ್ರಿಕಾ ಹಾಗೂ ರಂಜಿತ್ ಅವರು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ‘ಕೃತಕ ಬುದ್ಧಿ ಮತ್ತೆಯ ಯುಗದಲ್ಲಿ ಮೊಬೈಲ್ ದಾಸರಾಗುತ್ತಿರುವ ವಿದ್ಯಾರ್ಥಿಗಳ ನಡುವೆ ಮೈದಾನದಲ್ಲಿ ದಿನವಿಡೀ ಶ್ರಮವಹಿಸಿ ಯಶಸ್ಸಿಗಾಗಿ ಹಂಬಲಿಸುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕಾದ್ದು ಅಗತ್ಯ. ಪಾಠ ಪ್ರವಚನಗಳಿಗೆ ಮಾತ್ರ ವಿದ್ಯಾರ್ಥಿಗಳನ್ನು ಸೀಮಿತವಾಗಿರಿಸಿದರೆ ದೇಶವು ಪ್ರಗತಿಯ ಸಾಲಿನಲ್ಲಿ ಒಂದು ಹೆಜ್ಜೆ ಹಿಂದಿಟ್ಟಂತೆ. ಕ್ರೀಡಾಪಟುಗಳ ಸರ್ವತೋಮುಖ ಅಭಿವೃದ್ಧಿಗೆ ಕಾಲೇಜು ಸದಾ ಜೊತೆಯಾಗಿರುತ್ತದೆ. ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಲ್ಯಾಸ್ ಪಿಂಟೋ ಅವರ ಮಾರ್ಗದರ್ಶನವು ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article