ಈಜು ಸ್ಪರ್ಧೆ: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದಿಗಂತ್ ವಿ.ಎಸ್.ಗೆ ಪ್ರಶಸ್ತಿ

ಈಜು ಸ್ಪರ್ಧೆ: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದಿಗಂತ್ ವಿ.ಎಸ್.ಗೆ ಪ್ರಶಸ್ತಿ


ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ದಸರಾ ಕ್ರೀಡಾ ಉಪ ಸಮಿತಿ, ಮೈಸೂರು ಇದರ ಸಹಯೋಗದಲ್ಲಿ  ಸೆ.22 ರಿಂದ 25ರ ವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ‘ರಾಜ್ಯ ಮಟ್ಟದ ದಸರಾ ಕ್ರೀಡಾ ಕೂಟ ಸಿಎಂ ಕಪ್-2025’ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ದಿಗಂತ್ ವಿ.ಎಸ್ 100ಮೀ ಫ್ರೀ ಸ್ಟೈಲ್, 100ಮೀ ಮತ್ತು 200ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಕಂಚಿನ ಪದಕ ಹಾಗೂ 4×100 ಫ್ರೀ ಸ್ಟೈಲ್ ರಿಲೇ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಪಡೆದುಕೊಂಡಿರುತ್ತಾರೆ.

ಇವರು ಕೂರ್ನಡ್ಕ ನಿವಾಸಿ ವಿಶ್ವನಾಥ್ ಮತ್ತು ವೀಣಾ ಕುಮಾರಿ ದಂಪತಿಗಳ ಪುತ್ರ. ಇವರಿಗೆ ಪಾರ್ಥ ವಾರಣಾಸಿ ತರಬೇತಿ ನೀಡಿರುತ್ತಾರೆ.

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article