ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
Saturday, September 6, 2025
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ. ಜಿಲ್ಲೆ ಮಂಗಳೂರು ಹಾಗೂ ರೋಟರಿ ಪ.ಪೂ. ಕಾಲೇಜು ಮೂಡಬಿದ್ರೆ ಇವರ ಜಂಟಿ ಆಶ್ರಯದಲ್ಲಿ ಆ.26 ರಂದು ರೋಟರಿ ಪ.ಪೂ. ಕಾಲೇಜು ಮೂಡಬಿದ್ರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಅಸ್ಲಾಂ ಧನೀಷ್ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಮೊಹಮ್ಮದ್ ಶಮ್ಮಾಸ್ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.