
ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವು
Saturday, September 20, 2025
ಶಿರ್ವ: ಮೆದುಳಿನ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಬೆಳ್ಳೆ ಗ್ರಾ.ಪಂ. ವ್ಯಾಪ್ತಿಯ ಸುಜಾತಾ (40) ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ಸುಜಾತಾ ಇವರು ಮೆದುಳಿನ ಸಮಸ್ಯೆಯ ಬಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾನಸಿಕ ಖಿನ್ನತೆಯ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿದ್ದು, ತನ್ನ ತಾಯಿಯ ಸಕ್ಕರೆ ಕಾಯಿಲೆಯ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಳು. ವಿಷಯ ತಿಳಿದ ಮನೆಯವರು ಅವಳನ್ನು ಮೂಡುಬೆಳ್ಳೆಯ ಖಾಸಗಿ ಕ್ಲಿನಿಕ್‌ಗೆ ಕರೆದೊಯ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೆ.19 ರಂದು ಮೃತಪಟ್ಟಿದ್ದಾರೆ.
ತಾಯಿ ಮೀನಾಕ್ಷಿ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.