ನೂತನ ಅಂಬೇಡ್ಕರ್ ಭವನ ಲೋಕಾರ್ಪಣೆ

ನೂತನ ಅಂಬೇಡ್ಕರ್ ಭವನ ಲೋಕಾರ್ಪಣೆ


ಶಿರ್ವ: ಬೆಳ್ಮಣ್ ಭಾಗದ ಬಹುಕಾಲದ ಬೇಡಿಕೆಯ ಹಿನ್ನಲೆಯಲ್ಲಿ ಬಹಳ ವರ್ಷಗಳ ನಂತರ ವ್ಯವಸ್ಥಿತ ಭವನದ ನಿರ್ಮಾಣವಾಗಿದೆ. 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಭವನವನ್ನು ಸಮುದಾಯದ ಜನರ ಅನುಕೂಲದ ತಕ್ಕಂತೆ ನಿರ್ಮಾಣ ಮಾಡಲಾಗಿದೆ. ಸಮುದಾಯದ ಕಾರ್ಯಚಟುವಟಿಕೆಗಳಿಗೆ ಈ ಭವನ ಪ್ರಯೋಜನಕ್ಕೆ ಬರುವಂತಾಗಲಿ. ಮುಂದಿನ ಕೆಲವೇ ದಿನಗಳಲ್ಲಿ ಸುಮಾರು 6 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾರ್ಕಳ ತಾಲೂಕಿನ ಅಂಬೇಡ್ಕರ್ ಭವನ ಲೋಕಾರ್ಪಣೆಗೊಳ್ಳಲಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕಾರ್ಕಳ, ಬೆಳ್ಮಣ್ ಗ್ರಾಮ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಇಟ್ಟಮೇರಿಯಲ್ಲಿ ನಿರ್ಮಿಸಿದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಮೇಶ್ವರಿ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. 

ಗ್ರಾ.ಪಂ ಉಪಾಧ್ಯಕ್ಷ ಸಂದೀಪ್ ಅಂಚನ್, ಮಾಜಿ ಉಪಾಧ್ಯಕ್ಷೆ ಸಹಾನ ಕುಂದರ್ ಸೂಡಾ, ಸಮುದಾಯದ ಪ್ರಮುಖರಾದ ಮುದ್ದು, ಕುಟ್ಟಿ, ಗ್ರಾಮಸ್ಥರಾದ ನಮಿತಾ ಬೋಳ, ಮಾಜಿ ಜಿಲ್ಲಾ ಪಂ. ಸದಸ್ಯೆ ರೇಶ್ಮಾ ಉದಯ್ ಶೆಟ್ಟಿ, ಮಾಜಿ ತಾ.ಪಂ. ಸದಸ್ಯೆ ಆಶಾ ದೇವೇಂದ್ರ ಶೆಟ್ಟಿ, ಸೂರ್ಯಕಾಂತ್ ಶೆಟ್ಟಿ ಕೆದಿಂಜೆ, ದೇವೇಂದ್ರ ಶೆಟ್ಟಿ, ಬೋಳ ಸತೀಶ್ ಪೂಜಾರಿ, ರವೀಂದ್ರ ಶೆಟ್ಟಿ ಮುಲ್ಲಡ್ಕ, ಗ್ರಾ.ಪಂ ಸದಸ್ಯರು, ಸಮುದಾಯದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು. 

ಗ್ರಾ.ಪಂ ಸದಸ್ಯ ಅಶೋಕ್ ದೇವಾಡಿಗ ಸ್ವಾಗತಿಸಿ, ಜೆರಲ್ಡ್ ಡಿಸೋಜಾ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಮತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಕುಮಾರ್ ನಾಯ್ಕ್ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article