ಸುಬ್ರಹ್ಮಣ್ಯದಲ್ಲಿ ಸ್ವಚ್ಛತಾ ಕಾರ್ಯ
Sunday, September 28, 2025
ಸುಬ್ರಹ್ಮಣ್ಯ: ‘ಸ್ವಚ್ಛತಾ ಹೀ ಸೇವಾ ಸ್ವಚ್ಛತೆ ಪಾಕ್ಷಿಕ-2025’ ಅಭಿಯಾನ ಕಾರ್ಯಕ್ರಮದಡಿಯಲ್ಲಿ 12ನೇ ದಿನವಾದ ಇಂದು ಸುಬ್ರಹ್ಮಣ್ಯದ ಅಂಚೆ ಕಚೇರಿ ಪರಿಸರ ಹಾಗೂ ಕೆಎಸ್‌ಎಸ್ ಕಾಲೇಜು ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಂಚೆ ಇಲಾಖೆ ಹಾಗೂ ಕೆಎಸ್‌ಎಸ್ ಕಾಲೇಜು ಶಿಕ್ಷಕರಕ್ಷಕ ಸಂಘ ಮತ್ತು ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ ಲಿಜನ್ ಹಾಗೂ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಜಂಟಿಯಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿರುವರು.
ಟ್ರಸ್ಟ್‌ನ ಸಂಸ್ಥಾಪಕ ಹಾಗೂ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಡಾ. ರವಿ ಕಕ್ಕೆ ಪದವು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಡಿ ಸುಬ್ರಹ್ಮಣ್ಯ ಅಂಚೆ ಕಚೇರಿಯ ಉಪ ಅಂಚೆ ಪಾಲಕರು, ಸೀನಿಯರ್ ಚೇಂಬರ್ ಪದಾಧಿಕಾರಿಗಳು, ಶಿಕ್ಷಕರ ರಕ್ಷಕ ಸಂಘದ ಪದಾಧಿಕಾರಿಗಳು ಹಾಗೂ ರವಿ ಕಕ್ಕೆ ಪದ ಸಮಾಜ ಸೇವಾ ಟ್ರಸ್ಟ್ ನ ಸ್ವಯಂಸೇವಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

