
ಅಡಿಕೆ ಕಳ್ಳತನ ಮಾಡಿದ ಆರೋಪಿಗಳ ಬಂಧನ
Saturday, September 20, 2025
ಸುಳ್ಯ: ಗೋಡಾನಿನಲ್ಲಿ ಇರಿಸಿದ್ದ ಅಡಿಕೆಯನ್ನು ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ನಿವಾಸಿ ಸುಪ್ರಿತ್ ಕೆ. (22) ಹಾಗೂ ಜಾಲ್ಸೂರು ಗ್ರಾಮದ ನಿವಾಸಿ ಮಹಮ್ಮದ್ ಸಿನಾನ್(21) ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:
ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಾವರ ಪೇಟೆಯಲ್ಲಿರುವ ದಿನಸಿ ಅಂಗಡಿ ಮಾಲಕ ಮಹಮ್ಮದ್ ರಫೀಕ್ ಎಸ್.ಡಿ. ಅವರ ಅಡಿಕೆ ಸಂಗ್ರಹಿಸುವ ಗೋಡಾನ್‌ನಿಂದ ಸೆ.12 ರಂದು ರಾತ್ರಿ ಅಡಿಕೆಯನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಇಬ್ಬರನ್ನು ಸೆ.19 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತ ಆರೋಪಿಗಳಿಂದ ಕಳುವು ಮಾಡಿದ ೧ ಕ್ವಿಂಟಲ್ ಸುಲಿದ ಅಡಿಕೆ ಮತ್ತು ಸಾಗಾಟ ಮಾಡಲು ಉಪಯೋಗಿಸಿರುವ ಕೆಎ 21 ಸಿ 5862ನೇ ನಂಬ್ರದ ಆಟೋ ರಿಕ್ಷಾವನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ.