ಅಪಘಾತ: ಓರ್ವ ಮಹಿಳೆ ಮೃತ್ಯು, ಇಬ್ಬರಿಗೆ ಗಾಯ
Wednesday, September 3, 2025
ಸುಳ್ಯ: ಲಾರಿ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಡಿಕೇರಿಯ ಸಿದ್ದಾಪುರದ ನಿವಾಸಿ ಪೊನ್ನಪ್ಪ ಅವರ ಪತ್ನಿ ಶೋಭಾ (47) ಎಂದು ತಿಳಿದುಬಂದಿದೆ.
ಸೆ.3 ರಂದು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕೊಡಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸುಳ್ಯ ಮಾರ್ಗವಾಗಿ ಹೊರಟಿದ್ದ ಟ್ಯಾಂಕರ್ ಲಾರಿ ಮತ್ತು ಸುಳ್ಯದಿಂದ ಮಡಿಕೇರಿ ಮಾರ್ಗವಾಗಿ ಸಾಗುತ್ತಿದ್ದ ಡಸ್ಟರ್ ಕಾರ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಕಾರು ಚಾಲಕ ದೇವಯ್ಯ(54) ಮತ್ತು ವನಜಾಕ್ಷಿ (44) ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 96/2025 ಕಲಂ 281, 125(a) 106 BNS ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.