
ಧರ್ಮಸ್ಥಳದಿಂದ 1,074 ಶಾಲೆಗಳಿಗೆ ಗೌರವ ಶಿಕ್ಷಕರ ನಿಯೋಜನೆ
Wednesday, September 17, 2025
ಉಜಿರೆ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದಡಿ 1,074 ಶಾಲೆಗಳಿಗೆ ಗೌರವ ಶಿಕ್ಷಕರ ನಿಯೋಜನೆ ಮಾಡಲಾಗಿದೆ ಎಂದು ಕಾರ್ಯನಿರ್ವಾಹಕ ಅನಿಲ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಾದ ಆಟದ ಮೈದಾನ, ಕುಡಿಯುವ ನೀರು, ಶೌಚಾಲಯ, ಪೀಠೋಪಕರಣಗಳ ಪೂರೈಕೆಗಾಗಿ ಕಳೆದ ಮೂವತ್ತು ವರ್ಷಗಳಲ್ಲಿ 73.07 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.