ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಬೃಹತ್ ಸಮಾವೇಶ
Wednesday, September 17, 2025
ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಆಡಳಿತಕ್ಕೊಳಪಟ್ಟ ಕೆ.ಜಿ.ಯಿಂದ ಪಿ.ಜಿ. ವರೆಗಿನ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಬೃಹತ್ ಸಮಾವೇಶ ಸೆ.21 ರಂದು ಭಾನುವಾರ ಅಪರಾಹ್ನ ಎರಡು ಗಂಟೆಯಿಂದ 6ರ ವರೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಹಿರಿಯ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಮಧ್ಯೆ ಮಧುರ ಬಾಂಧವ್ಯ ಭದ್ರಗೊಳಿಸುವುದರೊಂದಿಗೆ ಭವಿಷ್ಯದ ಸೇವಾಕಾರ್ಯಗಳಿಗೆ ಸಮಾವೇಶ ಪ್ರೇರಕವಾಗಲಿದೆ.
ಶಿಕ್ಷಣ ಸಂಸ್ಥೆಗಳ ಪ್ರಗತಿಯ ಸಿಂಹಾವಲೋಕನ, ಹಿರಿಯ ವಿದ್ಯಾರ್ಥಿಗಳ ಅನುಭವ, ಅನಿಸಿಕೆ ಹಂಚಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿ ಮಾರ್ಗದರ್ಶನ ನೀಡುವರು.