ಉಜಿರೆ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಜು.16 ರಿಂದ ಸೆ.16ರ ವರೆಗೆ ಎರಡು ತಿಂಗಳ ಕಾಲ ಪ್ರತಿದಿನ ಸಂಜೆ ಗಂಟೆ 6.30 ರಿಂದ 8ರ ವರೆಗೆ ನಡೆದ 54ನೇ ವರ್ಷದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ ವಿದ್ವಾಂಸರು ಹಾಗೂ ಕಲಾವಿದರನ್ನು ಸೆ.16 ರಂದು ರಾತ್ರಿ ನಡೆದ ಸಮಾರೋಪ ಸಮಾರಂಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಗೌರವಿಸಿ, ಅಭಿನಂದಿಸಿದರು.