ಮುಂಡಾಜೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ
Thursday, September 25, 2025
ಉಜಿರೆ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಸಮೀಪ ಮುಂಡಾಜೆಯ ಕಾಪು ಎಂಬಲ್ಲಿ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷಗೊಂಡ ಘಟನೆ ಸೆ.22 ರಂದು ಮಧ್ಯಾಹ್ನ 3 ಗಂಟೆ ವೇಳೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಹರಿಯವ ನದಿಯಲ್ಲಿ ಆನೆ ಸಂಚರಿಸುವುದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಹೆದ್ದಾರಿಗೆ ಸುಮಾರು 50 ಮೀ. ದೂರದಲ್ಲಿ ನೀರಾಟ ಆಡುತ್ತಿದ್ದ ಸಲಗವನ್ನು ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿಗೆ ಅಟ್ಟಿದರು.