
ಮೂಲಭೂತ ವಿಜ್ಞಾನವನ್ನು ಕಡೆಗಣಿಸದಿರಿ: ಡಾ. ಸತೀಶ್ಚಂದ್ರ ಎಸ್.
ಬೆಂಗಳೂರಿನ ಪಿ.ಇ.ಎಸ್ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಹುಲ್ ಎಸ್. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.ಕ್ವಾಂಟಮ್ ಕಂಪ್ಯೂಟಿಂಗ್ ನ ವಿಭಾಗಗಳು ಪ್ರಸ್ತುತ ಕಾಲದ ಉದ್ಯಮಗಳಲ್ಲಿ ಸಿಂಹಪಾಲು ಪಡೆದಿದೆ. .ಕ್ವಾಂಟಮ್ ವಿಜ್ಞಾನವನ್ನು ಅರ್ಥೈಸಿಕೊಳ್ಳಲು ಮೂಲಭೂತ ವಿಜ್ಞಾನವನ್ನ ಅರ್ಥೈಸಿಕೊಳ್ಳುವುದು ಬಿಟ್ಟರೆ ಬೇರೆ ಪ್ರತ್ಯೇಕ ದಾರಿಗಳಿಲ್ಲ.ಕ್ವಾಂಟಮ್ ವಿಜ್ಞಾನ ಕ್ಷೇತ್ರದಲ್ಲಿ ಹಿರಿಯ ವಿಜ್ಞಾನಿಗಳು ಹಾಸಿಕೊಟ್ಟಿರುವ ದಾರಿಯಲ್ಲಿ ಇಂದು ನಾವುಗಳು ಮುನ್ನಡೆಯುತ್ತಿದ್ದೇವೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ವಿಶ್ವನಾಥ್. ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದಿನ ಕಾಲದಲ್ಲಿ ನಾವುಗಳು ಇಂದು ಅನುಭವಿಸುವ ಆಧುನಿಕ ತಂತ್ರಜ್ಞಾನಗಳು ಲಭ್ಯವಿರಲಿಲ್ಲ. ನಾವುಗಳು ಅನುಭವಿಸುವ ಎಲ್ಲಾ ಸೌಕರ್ಯಗಳು ಕೂಡ ವಿಜ್ಞಾನದ ಕೊಡುಗೆಯಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಉನ್ನತ ಶಿಕ್ಷಣದ ನಂತರ ವಿದ್ಯಾರ್ಥಿಗಳು ಸಂಶೋಧನೆಯ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರಿನ ಸಂತ ಅಲೋಷಿಯಸ್ ಕಾಲೇಜಿನ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ನೀಲಕಂಠನ್ ವಿ.ಕೆ ಮತ್ತು ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜಿನ ಉಪ ಪ್ರಾಂಶುಪಾಲೆ ಮತ್ತು ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದಕುಮಾರಿ ಕೆ.ಪಿ ಸ್ವಾಗತಿಸಿ, ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ದಿವ್ಯಾ ವಂದಿಸಿದರು.
ವಿದ್ಯಾರ್ಥಿನಿಯರಾದ ಅಪೂರ್ವ ಮತ್ತು ಬಳಗದವರು ಪ್ರಾರ್ಥಿಸಿದರು.
ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಅನ್ವಿಟಾ ಸೇರಾ ಕಾರ್ಯಕ್ರಮ ನಿರೂಪಿಸಿದರು.