
ಸೋಮೇಶ್ವರ ಕಡಲ ಕಿನಾರೆಯಲ್ಲಿ ಮೃತಹೇಹ ಪತ್ತೆ
Sunday, September 21, 2025
ಉಳ್ಳಾಲ: ಕುಂಪಲ ಚೇತನನಗರ ನಿವಾಸಿ ವಿನೋದ್ ಕುಂಪಲ (49) ಎಂಬವರ ಮೃತ ದೇಹವು ಸೋಮೇಶ್ವರ ಕಡಲ ಕಿನಾರೆಯಲ್ಲಿ ಶನಿವಾರ ಪತ್ತೆಯಾಗಿದೆ.
ವಿನೋದ್ ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ ಮನೆಯಿಂದ ಹೊರಟ ಅವರು ಕೆಲಸಕ್ಕೂ ತೆರಳದೆ ರಾತ್ರಿ ಮನೆಗೂ ಮರಳದೆ ನಾಪತ್ತೆಯಾಗಿದ್ದರು.
ಶನಿವಾರ ಮುಂಜಾನೆ ಸೋಮೇಶ್ವರ ಪುರಸಭಾ ಕಚೇರಿ ಬಳಿಯ ಸಮುದ್ರ ಕಿನಾರೆಯಲ್ಲಿ ಅಪರಿಚಿತ ಮೃತ ದೇಹ ವೊಂದು ಪತ್ತೆಯಾಗಿದ್ದು ಸ್ಥಳೀಯರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ ಶವದ ಗುರುತು ಪತ್ತೆ ಹಚ್ಚಿದ್ದು, ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಿಪರೀತ ಸಾಲದಿಂದ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.ಉಳ್ಳಾಲ ಪೊಲೀಸರು ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.