ಪೋಕ್ಸೋ ಪ್ರಕರಣ ದಾಖಲು
Wednesday, September 24, 2025
ವಿಟ್ಲ: ಪೋಷಕರು ಕೆಲಸಕ್ಕೆ ಹೋಗಿದ್ದ ವೇಳೆಗೆ ಅಪ್ರಾಪ್ತ ಬಾಲಕಿ ಮನೆಗೆ ಬಂದು ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಮನೆಯವರು ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸ್ಥಳೀಯ ನಿವಾಸಿ ನಾರಾಯಣ (42) ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.