ಸ್ಕೂಟರ್ ಢಿಕ್ಕಿ ಪಾದಚಾರಿಗೆ ಗಾಯ

ಸ್ಕೂಟರ್ ಢಿಕ್ಕಿ ಪಾದಚಾರಿಗೆ ಗಾಯ

ಬಂಟ್ವಾಳ: ಸ್ಕೂಟರ್ ಢಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಗಾಯಗೊಂಡ ಘಟನೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಸಮೀಪದ ಬೋಳಂಗಡಿ ಎಂಬಲ್ಲಿ ಸಂಭವಿಸಿದೆ.

ಗಾಯಾಳುವನ್ನು ಬೋಳಂಗಡಿ ನಿವಾಸಿ ಇಬ್ರಾಹಿಂ (66) ಎಂದು ಗುರುತಿಸಲಾಗಿದೆ.

ಇವರು ಮನೆಯಿಂದ ಮೆಲ್ಕಾರ್ ಕಡೆಗೆ ಹೋಗಲು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಮೆಲ್ಕಾರ್ ಕಡೆಯಿಂದ ಕಲ್ಲಡ್ಕದತ್ತ ತೆರಳುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 

ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article