ಅಕ್ರಮ ಗಾಂಜಾ ಸಾಗಾಟ: ಮತ್ತಿಬ್ಬರ ಬಂಧನ
Monday, October 13, 2025
ಬಂಟ್ವಾಳ: ಅಬಕಾರಿ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದ ಅಕ್ರಮ ಗಾಂಜಾ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆ ಸಮೀಪದ ಜುಮಾದಿಗುಡ್ಡೆಯ ನಿವಾಸಿ ಮೊಹಮ್ಮದ್ ಅಜರುದ್ದೀನ್ ಹಾಗೂ ಅಮ್ಮೆಮಾರ್‌ನ ಮೊಹಮ್ಮದ್ ಅಶ್ರಫ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 10 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಇದೇ ಪ್ರಕರಣದಲ್ಲಿ ಅ.8 ರಂದು ಅಬ್ದುಲ್ ಸಾದಿಕ್ ಮತ್ತು ಅಬ್ದುಲ್ ಮಜೀದ್ ಎಂಬವರಿಬ್ಬರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿಯರ ಸಂಖ್ಯೆ ನಾಲ್ಕಕ್ಕೇರಿದೆ.