‘ಗ್ಯಾರಂಟಿ ಮೂದಲಿಸಿದವರೇ ಇಂದು ಕಾಪಿ ಮಾಡುತ್ತಿದ್ದಾರೆ’: ಎಚ್.ಎಂ. ರೇವಣ್ಣ

‘ಗ್ಯಾರಂಟಿ ಮೂದಲಿಸಿದವರೇ ಇಂದು ಕಾಪಿ ಮಾಡುತ್ತಿದ್ದಾರೆ’: ಎಚ್.ಎಂ. ರೇವಣ್ಣ


ಬಂಟ್ವಾಳ: ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಯೋಜನೆಯನ್ನು ಮೂದಲಿಸಿದವರೇ ಇಂದು ಅದನ್ನು ಕಾಪಿ ಮಾಡುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.

ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಡಾ. ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ಮಂಗಳವಾರ ನಡೆದ ಗೃಹಲಕ್ಷ್ಮೀ ಫಲಾನುಭವಿಗಳ ಸ್ವಸಹಾಯ ಸಂಘಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದ.ಕ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ಸವಲತ್ತು ಪಡೆವರಿದ್ದಾರೆ. ಆದರೆ ಸವಲತ್ತು ಪಡೆದವರೇ ಯೋಜನೆಯನ್ನು ಟೀಕಿಸುತ್ತಿದ್ದಾರೆ ಎಂದರು. 

ಬಿಜೆಪಿಗರ ಯೋಜನೆಗಳು ಕೇವಲ ಭಾಷಣಕ್ಕೆ ಸೀಮಿತವಾಗಿದೆ, ಅದು ಕಾರ್ಯರೂಪಕ್ಕೆ ಬರುವುದಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಚುನಾವಣೆ ಸಂದರ್ಭ ನೀಡಿದ್ದ ಎಲ್ಲಾ ಭರವಸೆಗಳು ಈಡೇರಿದೆ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಹಿತ ಅನೇಕ ಯೋಜನೆಗಳನ್ನು ತಾಲೂಕಿನಲ್ಲಿ ಅತ್ಯಂತ ಹೆಚ್ಚು ಪಲಾನುಭವಿಗಳು ಪಡೆದಿದ್ದಾರೆ ಎಂದು ತಿಳಿಸಿದರು. 

ಹಸಿವು ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಕಾಂಗ್ರೆಸ್ ಸರಕಾರದ ಅನೇಕ ಯೋಜನೆಗಳು ಟೀಕೆಯನ್ನು ಮೀರಿ ಜನಪ್ರಿಯವಾಗಿದೆ ಎಂದು ಅವರು ತಿಳಿಸಿದರು.

ಪಂಚ ಗ್ಯಾರಂಟಿ ಯೋಜನೆಗಳ  ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಪ್ಪಾ ಅಮರನಾಥ್ ,ಪಂಚ ಗ್ಯಾರಂಟಿ ಯೋಜನೆಗಳ  ಅನುಷ್ಠಾನ ಸಮಿತಿ ದ.ಕ.ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ,ಪುರಸಭಾಧ್ಯಕ್ಷ ವಾಸುಪೂಜಾರಿ ಲೊರೆಟ್ಟೋ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಕರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾಗಟ್ಟಿ, ಪಂಚ ಗ್ಯಾರಂಟಿ ಯೋಜನೆಗಳ  ಅನುಷ್ಠಾನ ಜಿಲ್ಲಾ ಸಮಿತಿ ಉಪಾಧ್ಯಕ್ಷ ನಾರಾಯಣ ನಾಯ್ಕ್ ,ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಯ ಸಮಿತಿ ಅಧ್ಯಕ್ಷ ಸುಧೀರ್ ಶೆಟ್ಟಿ, ಜಿಪಂ ಸಿಇಒ ನರ್ವಾಡೆ ವಿನಾಯಕ ಕಾರ್ಬಾರಿ, ಗೃಹಲಕ್ಷ್ಮೀ ಜಿಲ್ಲಾ ನೋಡಲ್ ಅಧಿಕಾರಿ ಉಸ್ಮಾನ್ ಅತಿಥಿಗಳಾಗಿ ಭಾಗವಹಿಸಿದ್ದರು. ತಾಲೂಕು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಪಂಚಗ್ಯಾರಂಟಿ ಯೋಜನೆಗಳ  ಅನುಷ್ಠಾನ ಸಮಿತಿಯ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಅವರು  ಪ್ರಸ್ತಾವನೆಗೈದು , ತಾಲೂಕು ಸಮಿತಿ ಅಶ್ರಯದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ತಾಲೂಕಿಗೆ ಐದು ಯೋಜನೆಗಳಿಗೆ ಇದುವರೆಗೆ 528 ಕೋ.ರೂ.ಅನುದಾನ ಬಿಡುಗಡೆಗೊಂಡಿದೆ ಎಂದು ಸಭೆಯ ವಿವರಿಸಿದರು.

ಇದೇ ವೇಳೆ ಸ್ವಸಹಾಯ ಗುಂಪುಗಳ ಮೂಲಕ ಸಾಧನೆಗೈದ ಸಂಘಗಳನ್ನು ಗುರುತಿಸಿ ಅಭಿನಂದನೆ ಸಲ್ಲಿಸಲಾಯಿತು. ತಾ.ಪಂ.ಇಒ ಸಚಿನ್ ಕುಮಾರ್ ಸ್ವಾಗತಿಸಿದರು. ಪಿಡಿಒ ಸುನೀಲ್ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article