ಬಂಟ್ವಾಳ ವಲಯ ಅರಣ್ಯ ಗಸ್ತುಪಾಲಕ ಜಿತೇಶ್ಗೆ ಮುಖ್ಯಮಂತ್ರಿ ಚಿನ್ನದ ಪದಕ
Sunday, October 12, 2025
ಬಂಟ್ವಾಳ: ಅರಣ್ಯ ಇಲಾಖೆಯ ಬಂಟ್ವಾಳ ವಲಯದ ಅರಣ್ಯ ಗಸ್ತುಪಾಲಕ ಜಿತೇಶ್ ಪಿ. ಅವರಿಗೆ ಮುಖ್ಯಮಂತ್ರಿ ಪದಕ ದೊರೆತಿದ್ದು, ಬೆಂಗಳೂರಿನ ವಿಧಾನಸೌಧದ ಬ್ಯಾಂಕೆಟ್ ಹಾಲ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪದಕ ಸ್ವೀಕರಿಸಿದರು.
ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ ಸರಕಾರದಿಂದ ಅರಣ್ಯ ಇಲಾಖೆಯ ವಿವಿಧ ವಿಭಾಗಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿರುವ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನೀಡುವ ಮುಖ್ಯಮಂತ್ರಿ ಪದಕ ನೀಡಲಾಗುತ್ತಿದ್ದು, ಅಕ್ರಮ ಮರ ಕಡಿಯುವುದು ಮತ್ತು ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆಯ ಕ್ಷೇತ್ರದಲ್ಲಿ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್ ಪಿ. ಮುಖ್ಯಮಂತ್ರಿ ಚಿನ್ನದ ಪದಕ ದೊರೆತಿದೆ.
ಜಿತೇಶ್ ಪಿ. ಅವರು ಮಂಗಳೂರಿನ ಕುಳಾಯಿ ಚಿತ್ರಾಪುರದ ನಿವಾಸಿಯಾದ ಯಾಧವ ಪುತ್ರನ್ ಸೇವಂತಿ ಕಾಂಚನ ಅವರ ಪುತ್ರರಾಗಿದ್ದಾರೆ.