ಬಾಲಕರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನೂತನ ಕಟ್ಟಡವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಾ ನವೀನ್ ಕೋಡ್ಲಕ್ಕೆ,ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವಪ್ರಮಾಣ ಸಂಸ್ಥೆ ಅದ್ಯಕ್ಷೆ ಲಾವಣ್ಯ ಬಲ್ಲಾಳ್, ದ.ಕ.ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ ಎನ್.ನಾಯಕ್,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಂಟ್ವಾಳ ಅಧಿಕಾರಿ ಶೇಷಗಿರಿ ನಾಯಕ್, ಬೆಳ್ತಂಗಡಿ ಅಧಿಕಾರಿ ಜೋಸೆಫ್ .ಪಿ.ಎಸ್., ದ.ಕ. ಜಿಲ್ಲಾ ನಿರ್ಮಿತಿ ಕೇಂದ್ರ ದ ಅಧಿಕಾರಿ ನವೀನಚಂದ್ರ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಬೆಳ್ತಂಗಡಿ ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಆಕರಿ ಭವಾನಿ ಶಂಕರ್ ಶೆಟ್ಟಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ. ಸ್ಥಳೀಯ ಗ್ರಾ.ಪಂ.ಸದಸ್ಯ ಹನೀಫ್, ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಕೃಷ್ಣ, ನಿರ್ಮಿತಿ ಗುತ್ತಿಗೆದಾರ ಪ್ರಶಾಂತ್ ಪ್ರತಿಮಾ ಮಡಂತ್ಯಾರ್, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.