ಅಕ್ರಮ ಕಲ್ಲಿನಕೋರೆಗೆ ಬಂಟ್ವಾಳ ತಹಶೀಲ್ದಾರ್ ಭೇಟಿ
Saturday, October 18, 2025
ಬಂಟ್ವಾಳ: ಬಿ. ಮೂಡ ಗ್ರಾಮದ ಪಲ್ಲಮಜಲು, ಕಲ್ಲಗುಡ್ಡೆ ನಡೆಯುತ್ತಿರುವ ಅಕ್ರಮ ಕಲ್ಲಿನಕೋರೆಗೆ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರು ಭೇಟಿ ನೀಡಿದ್ದಾರೆ.
ಸಾರ್ವಜನಿಕರ ದೂರಿನ ಮೇರೆಗೆ ನಿಂತಿದ್ದ ಈ ಕಲ್ಲಿನ ಕೋರೆ ಇದೀಗ ಮತ್ತೆ ಸ್ಫೋಟಕ ಬಳಸಿಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪರಿಸರದ ಮನೆಗಳಿಗೆ ನಿರಂತರವಾಗಿ ಹಾನಿಯಾಗುತ್ತಿದೆ ಎಂದು ಇಲ್ಲಿನ ನಾಗರಿಕರು ಜಿಲ್ಲಾಧಿಕಾರಿ ಹಾಗೂ ತಹಸದೀಲ್ದಾರ್ ಅವರಿಗೆ ದೂರು ಸಲ್ಲಿಸಿದ್ದರು.
ಇದಕ್ಕೆ ಸ್ಪಂದಿಸಿದ ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಅವರು ಈ ಅಕ್ರಮ ಕಲ್ಲಿನ ಕೋರೆಗೆ ಹಠಾತ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಎಲ್ಲಾ ಮನೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.
ಗಣಿಗಾರಿಕೆಯಿಂದ ಹಾನಿಯಾದ ಮನೆಗಳನ್ನು ಪರಿಶೀಲಿಸಿದ ತಹಶೀಲ್ದಾರ್ ಅವರು ಸಾರ್ವಜನಿಕರಿಗೆ ಅನ್ಯಾಯಯವಾಗದಂತೆ ಸೂಕ್ತ ಕ್ರಮ ಕೈಗೊಳ್ಳುವುದರೊಂದಿಗೆ ಗಣಿ ಇಲಾಖೆಗೆ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದ್ದಾರೆ.